ರಾಷ್ಟ್ರಪತಿಯಿಂದ ಕ್ಷಮಾದಾನ ಅರ್ಜಿ ತಿರಸ್ಕಾರ: ಯಾಕೂಬ್ ಮೆಮನ್ ಗೆ ಗಲ್ಲು
1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಯಾಕೂಬ್ ಮೆಮನ್ ಎರಡನೇ ಬಾರಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದಾರೆ.

Published On :
ನವದೆಹಲಿ: 1993 ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಯಾಕೂಬ್ ಮೆಮನ್ ಎರಡನೇ ಬಾರಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿರಸ್ಕರಿಸಿದ್ದಾರೆ. ನಿಗದಿಯಂತೆಯೇ ಗುರುವಾರ ಬೆಳಿಗ್ಗೆ ನಾಗ್ಪುರ ಜೈಲಿನಲ್ಲಿ ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ.
ಕ್ಷಮಾದಾನ ಅರ್ಜಿ ಬಗ್ಗೆ ಚರ್ಚೆ ನಡೆಸಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ರಾಜನಾಥ್ ಸಿಂಗ್ ಯಾಕೂಬ್ ಮೆಮನ್ ಗೆ ಗಲ್ಲುಶಿಕ್ಷೆ ವಿಧಿಸುವ ಬಗ್ಗೆ ಪುನರ್ ಪರಿಶೀಲನೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರೊಂದಿಗೆ ಸತತ 2 ಗಂಟೆಗಳ ಕಾಲ ಯಾಕೂಬ್ ಮೆಮನ್ ಅರ್ಜಿ ಬಗ್ಗೆ ಚರ್ಚೆ ನಡೆಸಿದ್ದರು. ಸಚಿವ ಸಂಪುಟದ ಸಲಹೆಯನ್ನು ಪರಿಗಣಿಸಿರುವ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಇದಕ್ಕೂ ಮುನ್ನ ಗಲ್ಲು ಶಿಕ್ಷೆ ಪ್ರಶ್ನಿಸಿ ಯಾಕೂಬ್ ಮೆಮನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದನು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳಾದ ಡಿ.ಮಿಶ್ರಾ, ನ್ಯಾ.ಪಿ.ಸಿ ಪಂತ್ ನೇತೃತ್ವದ ವಿಸ್ತೃತ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು. ಈ ಮೂಲಕ ಯಾಕೂಬ್ ಮೆಮನ್ ಕಾನೂನು ಹೋರಾಟದ ಕೊನೇ ಅವಕಾಶದಲ್ಲೂ ಸೋಲು ಕಂಡಂತಾಗಿದೆ.
ನಿನ್ನೆ ಯಾಕೂಬ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ದ್ವಿಸದಸ್ಯ ಪೀಠದ ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ ಉಂಟಾದ ಹಿನ್ನಲೆಯಲ್ಲಿ ಅರ್ಜಿ ವಿಚಾರಣೆಯನ್ನು ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಾಪೀಠಕ್ಕೆ ವರ್ಗಾವಣೆ ಮಾಡಿ, ಗಲ್ಲು ಶಿಕ್ಷೆಗೆ ತಡೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Pranab Mukherjeeಪ್ರಣಬ್ ಮುಖರ್ಜಿರಾಷ್ಟ್ರಪತಿPresidentYakub Memonಯಾಕೂಬ್ ಮೆಮನ್Mercy Pleaಕ್ಷಮಾದಾನ ಅರ್ಜಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


