ಗುರುದಾಸ್‌ಪುರದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ, ಹೈಅಲರ್ಟ್ ಘೋಷಣೆ
ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆಯ ಮೇಲಿನ ದಾಳಿಯ ಘಟನೆ ಮಾಸುವ ಮುನ್ನವೆ ಗುರುದಾಸ್‌ಪುರದ ಬಸ್‌ಸ್ಟಾಂಡ್ ...

ಗುರುದಾಸ್‌ಪುರ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆಯ ಮೇಲಿನ ದಾಳಿಯ ಘಟನೆ ಮಾಸುವ ಮುನ್ನವೆ ಗುರುದಾಸ್‌ಪುರದ ಬಸ್‌ಸ್ಟಾಂಡ್ ಒಂದರಲ್ಲಿ ಗುರುವಾರ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಆತಂಕ ಮೂಡಿಸಿದೆ.
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪಂಜಾಬ್ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಅನುಮಾನಾಸ್ಪದ ವಸ್ತುವಿನ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ನಂತರ ಜಿಲ್ಲೆಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಕಳೆದ ಸೋಮವಾರ ಬೆಳಗ್ಗೆ ಸೈನಿಕರ ವೇಷದಲ್ಲಿ ಆಗಮಿಸಿದ್ದ ಮೂವರು ಉಗ್ರರು, ದೀನಾನಗರ್ ಪೊಲೀಸ್ ಠಾಣೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದರು. ಉಗ್ರರನ್ನು ಹತ್ತಿಕ್ಕಲು ಸುಮಾರು 12 ತಾಸುಗಳ ಕಾಲ ನಡೆದ ಕಾರ್ಯಾಚರಣೆ ಸಂದರ್ಭದಲ್ಲಿ ಓರ್ವ ಎಸ್‌ಪಿ ದರ್ಜೆಯ ಅಧಿಕಾರಿ ಸೇರಿದಂತೆ 7 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿದ್ದರು. ಪ್ರತಿದಾಳಿಯಲ್ಲಿ ಎಲ್ಲ ಮೂವರು ಉಗ್ರರನ್ನು ಹತ್ಯೆಗೈಯಲಾಗಿತ್ತು.
ದಾಳಿಯಲ್ಲಿ ಮೃತಪಟ್ಟವರಿಗೆ ಸಂಸತ್‌ನ ಮೇಲ್ಮನೆ ರಾಜ್ಯಸಭೆಯಲ್ಲಿ ಗುರುವಾರ ಶೃದ್ದಾಂಜಲಿ ಸಲ್ಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


