ಗುರುದಾಸ್‌ಪುರ ದಾಳಿಯ ಉಗ್ರರು ಬಂದಿದ್ದು ಪಾಕ್‌ನಿಂದ: ರಾಜನಾಥ್ ಸಿಂಗ್
ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ...

ನವದೆಹಲಿ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.
ದಾಳಿಯ ಬಗ್ಗೆ ರಾಜ್ಯಸಭೆಗೆ ಮಾಹಿತಿ ನೀಡಿದ ಗೃಹ ಸಚಿವರು, ಜಿಪಿಎಸ್ ಮಾಹಿತಿ ಪ್ರಕಾರ, ಉಗ್ರರು ಪಾಕಿಸ್ತಾನದಿಂದ ರವಿ ನದಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ ಎಂದರು.
ಉಗ್ರರ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಪಂಜಾಬ್ ಪೊಲೀಸರನ್ನು ಅಭಿನಂದಿಸಿದ ರಾಜನಾಥ್ ಸಿಂಗ್, ಗಡಿಯಲ್ಲಿ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿರುವವರಿಗೆ ಭಾರತ ತಕ್ಕ ಉತ್ತರ ನೀಡಲಿದೆ ಎಂದರು.
ಒಂದು ಜಿಪಿಎಸ್ ಪರಿಕರದಲ್ಲಿ ತಲ್‍ವಾಂಡಿ, ಪರಮಾನಂದ ಗ್ರಾಮ, ದೀನಾನಗರ ಜಾಗಗಳನ್ನು ಗುರುತುಮಾಡಲಾಗಿದೆ. ಮತ್ತೊಂದರಲ್ಲಿ ಗುರುದಾಸ್‍ಪುರ್ ಜನವಸತಿ ಪ್ರದೇಶಗಳನ್ನು ಗುರುತು ಮಾಡಲಾಗಿದೆ. ಈ ಮೂಲಕ ಉಗ್ರರು, ತಮ್ಮ ದಾಳಿಗೆ ಜನನಿಬಿಡ ಪ್ರದೇಶಗಳನ್ನೇ ಗುರಿಯಾಗಿಸಿಕೊಂಡಿರುವುದು ದೃಢಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


