ದೇಶ

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತುಹಾಕಲು ಪ್ರಯತ್ನ ನಡೆಸುತ್ತಿದ್ದೇವೆ: ರಾಜನಾಥ್ ಸಿಂಗ್

ಭಯೋತ್ಪಾದನೆಯನ್ನು ಭಾರತದಿಂದ ಬೇರು ಸಮೇತವಾಗಿ ಕಿತ್ತುಹಾಕವ ಎಲ್ಲಾ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತುಹಾಕಲು ಪ್ರಯತ್ನ ನಡೆಸುತ್ತಿದ್ದೇವೆ: ರಾಜನಾಥ್ ಸಿಂಗ್
ಗೃಹ ಸಚಿವ ರಾಜನಾಥ್ ಸಿಂಗ್(ಸಂಗ್ರಹ ಚಿತ್ರ)
Published On :

ನವದೆಹಲಿ: ಭಯೋತ್ಪಾದನೆಯನ್ನು ಭಾರತದಿಂದ ಬೇರು ಸಮೇತವಾಗಿ ಕಿತ್ತುಹಾಕವ ಎಲ್ಲಾ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ.

ಪಂಜಾಬ್ ನ ಗುರುದಾಸ್ ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಹಾಗೂ ವಿವಿಧ ಜನನಿಬಿಡ ಪ್ರದೇಶದ ಮೇಲೆ ಉಗ್ರರು ನಡೆದಿಸ ದಾಳಿ ಕುರಿತಂತೆ ನಿನ್ನೆ ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಚಟುವಟಿಕೆಗಳನ್ನು ಬೇರುಸಮೇತವಾಗಿ ಕಿತ್ತುಹಾಕಲುವ ಎಲ್ಲಾ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಗಡಿಯಲ್ಲಿ ಈಗಾಗಲೇ ಎಲ್ಲಾ ರೀತಿಯಲ್ಲೂ ಭದ್ರತೆಯನ್ನು ರೂಪಿಸಲಾಗಿದೆ. ದೇಶದ ಏಕತೆ, ನಾಗರಿಕರ ಭದ್ರತೆ ಮತ್ತು ಸುರಕ್ಷತೆಗೆ ಧಕ್ಕೆ ತರುವ ಶತ್ರುಗಳಿಗೆ ನಮ್ಮ ಯೋಧರು ದಿಟ್ಟ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಉಗ್ರರ ಭಯೋತ್ಪಾದನಾ ಚಟುವಟಿಕೆಗಳನ್ನು ಸದೆಬಡಿಯಲು ಕೇಂದ್ರ ಸರ್ಕಾರ ಈಗಾಗಲೇ ಸರ್ವಸನ್ನದ್ಧವಾಗಿದ್ದು, ಉಗ್ರರನ್ನು ಹಿಮ್ಮೆಟ್ಟಿಸುವ ಶಕ್ತಿ ನಮ್ಮ ಭದ್ರತಾ ಪಡೆಗಳಿಗಿದ್ದು, ಜನತೆ ಆತಂಕ ಪಡಬೇಕಿಲ್ಲ. ಎಂದು ಹೇಳಿದ್ದಾರೆ.

ಗೃಹ ಸಚಿವ ಹೇಳಿಕೆ ನೀಡುತ್ತಿರುವ ಸಂದರ್ಭದಲ್ಲಿಯೇ ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಸಂಸದರನ್ನು ತರಾಟೆಗೆ ತೆಗೆದುಕೊಂಡ ಉಪಸಭಾಪತಿ ಪಿ.ಜೆ.ಕುರಿಯನ್ ಅವರು, ಘೋಷಣೆ ಕೂಗಲು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಇದು ರಾಜಕೀಯವಲ್ಲ. ದೇಶದ ಭದ್ರತೆಗೆ ಸಂಬಂಧಿಸಿದ್ದು, ಹೀಗಾಗಿ ಈ ಬಗ್ಗೆ ರಾಜಕೀಯವಾಗಿ ಕೂಗಾಟ ನಡೆಸುವುದನ್ನು ಸಂಸದರು ನಿಲ್ಲಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.