ದೇಶ

ಪ್ರತಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ: ಆ.3 ರಂದು ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ

ಕೇಂದ್ರ ಸರ್ಕಾರ ಸೋಮವಾರ(ಆ.3 ) ರಂದು ಸರ್ವಪಕ್ಷ ಸಭೆ ಕರೆದಿದೆ.

ಪ್ರತಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ: ಆ.3 ರಂದು ಕೇಂದ್ರ ಸರ್ಕಾರದಿಂದ ಸರ್ವಪಕ್ಷ ಸಭೆ
ಸಂಸತ್
Published On :

ನವದೆಹಲಿ: ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಿಂದ ಸಂಸತ್ ಕಲಾಪ ವ್ಯರ್ಥವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೋಮವಾರ(ಆ.3 ) ರಂದು ಸರ್ವಪಕ್ಷ ಸಭೆ ಕರೆದಿದೆ.

ವಿರೋಧ ಪಕ್ಷಗಳ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಂಸತ್ ನ ಉಭಯ ಸದನಗಳಲ್ಲೂ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ತೀವ್ರಗೊಂಡಿದ್ದು ಮುಂಗಾರು ಅಧಿವೇಶನ ವ್ಯರ್ಥವಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆದು ಸುಗಮ ಕಲಾಪಕ್ಕೆ ಬೆಂಬಲಿಸುವಂತೆ ವಿರೋಧಪಕ್ಷಗಳಿಗೆ ಮತ್ತೊಮ್ಮೆ ಮನವಿ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಲಲಿತ್ ಮೋದಿ ಪ್ರಕರಣದಲ್ಲಿ ಕೇಂದ್ರ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ವ್ಯಾಪಂ ಹಗರಣದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆಗೆ ಆಗ್ರಹಿಸಿ  ಸಂಸತ್ ಅಧಿವೇಶನ ಪ್ರಾರಂಭವಾದ ಮೊದಲ ದಿನದಿಂದಲೂ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ಪ್ರಮುಖ ವಿಷಯಗಳು ಹಾಗೂ ಮಸೂದೆಗಳ ಬಗ್ಗೆ ಚರ್ಚೆ ನಡೆಯದೇ ಕಲಾಪ ವ್ಯರ್ಥವಾಗುತ್ತಿದೆ.  ಜುಲೈ ತಿಂಗಳ ಕೊನೆ ದಿನದ ಕಲಾಪವೂ ಪ್ರತಿಪಕ್ಷಗಳ ಗದ್ದಲದಿಂದ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.