ದೇಶ

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ

ಸುಪ್ರೀಂಕೋರ್ಟ್ ನಿರ್ದೇಶನದಂತೆ, ಅಹಮದಾಬಾದ್‍ನ ವೈದ್ಯ ತಂಡವೊಂದು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ 14 ವರ್ಷ ವಯಸ್ಸಿನ ಬಾಲಕಿಗೆ...

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಅನುಮತಿ
ಅತ್ಯಾಚಾರ ಸಂತ್ರಸ್ತೆ
Published On :

ಅಹಮದಾಬಾದ್: ಸುಪ್ರೀಂಕೋರ್ಟ್ ನಿರ್ದೇಶನದಂತೆ, ಅಹಮದಾಬಾದ್‍ನ ವೈದ್ಯ ತಂಡವೊಂದು ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದ 14 ವರ್ಷ ವಯಸ್ಸಿನ ಬಾಲಕಿಗೆ ಗರ್ಭಪಾತ ಮಾಡಲು ಒಪ್ಪಿಗೆ ನೀಡಿದೆ.

ಕಾನೂನಿನ ಪ್ರಕಾರ ಗರ್ಭ ಕಟ್ಟಿ 20 ವಾರಗಳ ಒಳಗಿದ್ದರೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ಆದರೆ ಸುಪ್ರೀಂನ ವಿಶೇಷ ಆದೇಶ ಅನುಸರಿಸಿರುವ ವೈದ್ಯ ತಂಡ ಈ ನಿರ್ಧಾರ ಕೈಗೊಂಡಿದೆ. ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್ ಈ ಅತ್ಯಾಚಾರ ಸಂತ್ರಸ್ತ ಬಾಲಕಿಗೆ ಗರ್ಭಪಾತ ಮಾಡಿಸಲು ಸಮ್ಮತಿ ನೀಡದಿದ್ದಾಗ, ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಶುಕ್ರವಾರ
ಗರ್ಭಪಾತ ನಡೆಯುವ ಸಾಧ್ಯತೆಯಿದೆ.

ಕಳೆದ ವರ್ಷ ಟೈಫಾಯಿಡ್‍ಗೆ ತುತ್ತಾಗಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಬಾಲಕಿ ಮೇಲೆ ಅಲ್ಲಿನ ವೈದ್ಯ ಜತಿನ್ ಮೆಹ್ತಾ ಅತ್ಯಾಚಾರ ಎಸಗಿದ್ದರೆಂದು ಆರೋಪ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.