ದೇಶ

ರಾಜಧಾನಿಯಲ್ಲಿ ಗದ್ದುಗೆ ಹಿಡಿಯಲು ಎಲ್ಲರೂ ಸಕ್ರಿಯರಾಗಿ: ಪರಮೇಶ್ವರ್

ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು. ಅಧಿಕಾರದ ಗದ್ದುಗೆ ಹಿಡಿಯಲು ಪಕ್ಷದ ಎಲ್ಲ ಹಿರಿಯ ನಾಯಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ..ಜಿ.ಪರಮೇಶ್ವರ ಹೇಳಿದರು...

ರಾಜಧಾನಿಯಲ್ಲಿ ಗದ್ದುಗೆ ಹಿಡಿಯಲು ಎಲ್ಲರೂ ಸಕ್ರಿಯರಾಗಿ: ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು. ಅಧಿಕಾರದ ಗದ್ದುಗೆ ಹಿಡಿಯಲು ಪಕ್ಷದ ಎಲ್ಲ ಹಿರಿಯ ನಾಯಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹೇಳಿದರು.

ಕೆಪಿಸಿಸಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ರಾಜಧಾನಿಯಲ್ಲಿ ಪಕ್ಷದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿಯುವುದಕ್ಕೆ ಎಲ್ಲರೂ ಶ್ರಮಿಸಬೇಕಿದೆ ಎಂದು ಸೂಚನೆ ನೀಡಿದರು. ಬಿಬಿಎಂಪಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರ ಸಂಬಂಧ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಕೆಲ ಮಾನದಂಡಗಳನ್ನು ಅನುಸರಿಸಲು ನಿರ್ಧರಿಸಲಾಗಿದೆ. ಅವುಗಳ ವಿವರ ಹೀಗಿದೆ:

  • ಈ ಹಿಂದೆ ನಡೆದ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಟಿಕೆಟ್ ನೀಡಬಾರದು.
  • ಪಕ್ಷಕ್ಕೆ ಸೇರ್ಪಡೆಗೊಂಡು ಕನಿಷ್ಠ 3 ವರ್ಷವಾಗಿರಬೇಕು.
  • ಗಂಭೀರ ಸ್ವರೂಪದ ಕ್ರಿಮಿನಲ್ ಆರೋಪ ಇರುವವರನ್ನು ಪರಿಗಣಿಸಬಾರದು.
  • ಭ್ರಷ್ಟಾಚಾರ ಆರೋಪ ಇರುವವರನ್ನು ಪರಿಗಣಿಸಬಾರದು.
  • ಸಾಮಾನ್ಯ ಸ್ಥಾನಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಬೇಕು.
  • ವಾರ್ಡ್‍ಗಳಲ್ಲಿ ಮತ್ತು ಬ್ಲಾಕ್ ಮಟ್ಟದಲ್ಲಿ ಜನಪ್ರಿಯತೆ ಕಳೆದು ಕೊಂಡವರಿಗೆ ಟಿಕೆಟ್ ನೀಡಬಾರದು.
  • ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯದ ಪ್ರಕಾರ ಟಿಕೆಟ್ ನೀಡಬೇಕು.

3ರಿಂದ ಬಿಬಿಎಂಪಿ ನಾಮಪತ್ರ ಸಲ್ಲಿಕೆ
ಹುಟ್ಟುಹಬ್ಬ ಇಲ್ಲವಂತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.