ಇಸಿಸ್ ದಾಳಿ ಭೀತಿ, 12 ರಾಜ್ಯಗಳ ಡಿಜಿಪಿಗಳ ಸಭೆ ಕರೆದ ರಾಜನಾಥ್ ಸಿಂಗ್
ಭಾರತದ ಮೇಲೆ ಇಸಿಸ್ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಶನಿವಾರ 12 ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಭೆ ಕರೆದಿದೆ.

ನವದೆಹಲಿ: ಭಾರತದ ಮೇಲೆ ಇಸಿಸ್ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಶನಿವಾರ 12 ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಸಭೆ ಕರೆದಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ತೆಲಂಗಾಣ, ಪಶ್ಚಿಮ ಬಂಗಾಳ ಸೇರಿದಂತೆ 12 ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಭಾಗವಹಿಸುತ್ತಿದ್ದಾರೆ.
ನಿನ್ನೆ ಲಿಬಿಯಾದಲ್ಲಿ ಇಸಿಸ್ ಉಗ್ರರು ಇಬ್ಬರು ಕನ್ನಡಿಗರು ಸೇರಿದಂತೆ ನಾಲ್ವರು ಭಾರತೀಯರನ್ನು ಅಪಹರಿಸಿದ್ದರು. ಬಳಿಕ ಉಗ್ರರು ಇಬ್ಬರು ಕನ್ನಡಗರನ್ನು ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಡಿಜಿಪಿಗಳ ಸಭೆ ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ ಇಸಿಸ್ ಉಗ್ರರ ದಾಳಿ ತಡೆಯುವ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


