ದೇಶ

ಉಗ್ರರ ದಾಳಿ, ಕಲಾಂ ವಿರುದ್ಧ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಪಂಜಾಬ್‌ನ ಗುರುದಾಸ್ ಪುರದಲ್ಲಿ ಉಗ್ರರ ದಾಳಿ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಕುರಿತು ಪಾಕಿಸ್ತಾನದ ಅಣು ವಿಜ್ಞಾನಿ...

ಉಗ್ರರ ದಾಳಿ, ಕಲಾಂ ವಿರುದ್ಧ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಯುವ ಕಾಂಗ್ರೆಸ್ ಪ್ರತಿಭಟನೆ
Published On :

ನವದೆಹಲಿ: ಪಂಜಾಬ್‌ನ ಗುರುದಾಸ್ ಪುರದಲ್ಲಿ ಉಗ್ರರ ದಾಳಿ ಹಾಗೂ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಕುರಿತು ಪಾಕಿಸ್ತಾನದ ಅಣು ವಿಜ್ಞಾನಿ ಎ.ಕ್ಯು. ಖಾನ್ ಅಪಮಾನಕರ ಹೇಳಿಕೆ ಖಂಡಿಸಿ ಪಾಕಿಸ್ತಾನ ವಿರುದ್ಧ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.

ಗುರುದಾಸ್ ಪುರದಲ್ಲಿ ಉಗ್ರರ ದಾಳಿ ಹಾಗೂ ಅಬ್ದುಲ್ ಕಲಾಂ ಅವರ ಕುರಿತು ಎ.ಕ್ಯು. ಖಾನ್ ಹೇಳಿಕೆ ಕುರಿತು ಪಾಕಿಸ್ತಾನ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಪಾಕಿಸ್ತಾನವು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಗೆ ಬೆಂಬಲ ನೀಡುತ್ತಿದ್ದು, ಭಾರತದ ಅತ್ಯುನ್ನತ ವಿಜ್ಞಾನಿ ಅಬ್ದುಲ್ ಕಲಾಂರನ್ನು ಸಾಮಾನ್ಯ ವಿಜ್ಞಾನಿ ಎಂದು ಎ.ಕ್ಯು. ಖಾನ್ ಕರೆದು ಅಪಮಾನಿಸಿರುವುದು ಭಾರತೀಯರಿಗೆ ಮಾಡಿರುವ ಅಪಮಾನ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಗ್ರರ ದಾಳಿ ಹಾಗೂ ಖಾನ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಭಾರತ ಸರ್ಕಾರವು ಪಾಕಿಸ್ತಾನದ ಜತೆಗಿನ ಸ್ನೇಹ ಸಂಬಂಧವನ್ನು ಕೊನೆಗೊಳಿಸಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.