ಡಾ.ಬಿ.ಆರ್ ಅಂಬೇಡ್ಕರ್ ಜಾತಿ ನಿರ್ಮೂಲನದ ಕನಸು ಇನ್ನೂ ಈಡೇರಿಲ್ಲ : ರಾಹುಲ್
ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ

ಮಾಹೌ: ದೇಶದಲ್ಲಿ ದಲಿತರು ಸೇರಿದಂತೆ ಕೆಲ ವರ್ಗಗಳ ಜನರನ್ನು ಅವರ ಹಕ್ಕುಗಳಿಂದ ದೂರ ಇಟ್ಟಿರುವುದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಾತಿ ನಿರ್ಮೂಲನಾ ಕನಸು ಇನ್ನೂ ಅಪೂರ್ಣವಾಗಿದ್ದು, ಅದು ಈಡೇರಲು ಸಾಧ್ಯವಾಗಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮೌಹಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅಂಬೇಡ್ಕರ್ ಅವರ ಆಸೆಯನ್ನು ಈಡೇರಿಸುವುದು ನನ್ನ ಕರ್ತವ್ಯ ನಿಮ್ಮ ಹಾಗೂ ಎಲ್ಲರ ಕರ್ತವ್ಯ ಎಂದು ಹೇಳಿದರು.
ಇನ್ನು ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ , ಮದ್ರಾಸ್ ಐಐಟಿಯಲ್ಲಿ ವಿದ್ಯಾರ್ಥಿ ಸಂಘಟನೆಗೆ ನಿಷೇಧ ಹೇರಿದ್ದು ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ. ಆ ಸಂಘಟನೆಯಲ್ಲಿ ದಲಿತರು ಪ್ರಮುಖ ಸದಸ್ಯರಾಗಿದ್ದರು ಹೀಗಾಗಿ ಆ ಸಂಘಟನೆಗೆ ನಿಷೇಧ ಹೇರಲಾಗಿದೆ ಎಂದು ದೂರಿದರು.
ಸಂವಿಧಾನ ರಚನೆಯಾಗಿ ಹಲವು ವರ್ಷಗಳೇ ಕಳೆದಿದ್ದರೂ ಇನ್ನೂ ದೇಶದಲ್ಲಿ ಜಾತಿ ವ್ಯವಸ್ಥೆ ಕಂಡುಬರುತ್ತಿರುವುದು ವಿಷಾಧನೀಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


