ಉ.ಪ್ರದೇಶದಲ್ಲಿ ಗ್ರಾಮದ ಮುಖ್ಯಸ್ಥ, ಸಹಚರನಿಂದ ಯುವತಿ ಮೇಲೆ ಗ್ಯಾಂಗ್‌ರೇಪ್
ಗ್ರಾಮದ ಮುಖ್ಯಸ್ಥನೊಬ್ಬ ತನ್ನ ಸಹಚರನೊಂದಿಗೆ ಸೇರಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ...

ಮುಜಾಫರನಗರ: ಗ್ರಾಮದ ಮುಖ್ಯಸ್ಥನೊಬ್ಬ ತನ್ನ ಸಹಚರನೊಂದಿಗೆ ಸೇರಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯುವತಿ ಯಾವುದೋ ಕೆಲಸಕ್ಕಾಗಿ ಗ್ರಾಮದ ಮುಖ್ಯಸ್ಥ ಫರ್ಜಾಂದ್ ಅಲಿಯ ಮನೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಅಲಿ ತನ್ನ ಸಹಚರ ಇಶ್ರಾರ್ ಅಹ್ಮದ್ ಜತೆಗೂಡಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾನೆಎಂದು ಆರೋಪಿಸಿ ಯುವತಿಯ ತಂದೆ ದೂರು ನೀಡಿರುವುದಾಗಿ ಕೈರಾನಾ ಪೊಲೀಸ್ ಠಾಣಾಧಿಕಾರಿ ಬಿ.ಪಿ.ಸಿಂಗ್ ಅವರು ತಿಳಿಸಿದ್ದಾರೆ.
ಅತ್ಯಾಚಾರದ ವಿಷಯ ಯಾರಿಗಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಯುವತಿಗೆ ಅಲಿ ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅತ್ಯಾಚಾರಿಗಳ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ನಾಪತ್ತೆಯಾಗಿರುವ ಅಲಿ ಹಾಗೂ ಆತನ ಸಹಚರನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


