ಮಳೆ ಅಭಾವ ಎದುರಿಸಲು ಸರ್ಕಾರ ಸಿದ್ಧ: ರಾಧ ಮೋಹನ್ ಸಿಂಗ್
ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳ ಜತೆಗೆ ಪ್ರಸಕ್ತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದ್ದು, ಬರಗಾಲ ಎದುರಾಗುವ ಸಾಧ್ಯತೆಯಿದ್ದು...

ನವದೆಹಲಿ: ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳ ಜತೆಗೆ ಪ್ರಸಕ್ತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದ್ದು, ಬರಗಾಲ ಎದುರಾಗುವ ಸಾಧ್ಯತೆಯಿದ್ದು, ಮಳೆ ಅಭಾವವನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ರಾಧಾ ಮೋಹನ ಸಿಂಗ್ ತಿಳಿಸಿದ್ದಾರೆ.
ಕೇಂದ್ರ ಕೃಷಿ ಇಲಾಖೆಯ ಒಂದು ವರ್ಷದ ಸಾಧನೆಗಳನ್ನು ಹಂಚಿಕೊಳ್ಳಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಅಭಾವದಿಂದ ಉಂಟಾಗುವ ಆಹಾರ ಉತ್ಪಾದನೆಯ ಕೊರತೆ ಹಾಗೂ ನಂತರ ಎದುರಾಗಬಹುದಾದ ಆರ್ಥಿಕ ಪರಿಣಾಮಗಳನ್ನು ಎದುರಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ‘ರಾಜ್ಯಗಳಿಂದ ಆಹಾರ ಉತ್ಪಾದನೆಯ ಮಾಹಿತಿಯನ್ನು ತರಿಸಿಕೊಳ್ಳಲಾಗುತ್ತಿದೆ. ಮಳೆ ಕೊರತೆ ಎದುರಿಸಲು ಸರ್ಕಾರ ಎಲ್ಲ ರೀತಿಯ ಸಿದ್ಧತೆ ನಡೆಸಿದೆ’ ಎಂದಿದ್ದಾರೆ.
ರೈತರ ಆದಾಯ ರಕ್ಷಣೆಯ ಉದ್ದೇಶದಿಂದ ಈ ವರ್ಷಾಂತ್ಯಕ್ಕೆ ಹೊಸ ಬೆಳೆ ವಿಮೆ ನೀತಿ ಜಾರಿಗೆ ತರಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಭಾರತದಲ್ಲಿ ಮಳೆಯ ಕಾರಣದಿಂದ ಕೃಷಿ ವಲಯದಲ್ಲಿ ಏರಿಳಿತ ಇದ್ದೇ ಇರುತ್ತದೆ. ಆದಾಗ್ಯೂ ನಮ್ಮ ನೀತಿಗಳ ಮೂಲಕ ನಷ್ಟದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


