ದೇಶ

ಭಾರತ ಪ್ರವಾಸ ಅನುಭವ ಹಂಚಿಕೆ: ಮೋದಿ ಕರೆಗೆ ಜನರಿಂದ ಭಾರಿ ಪ್ರತಿಕ್ರಿಯೆ

ಮೇ 31 ರಂದು ಆಕಾಶವಾಣಿಯಲ್ಲಿ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾರತ ಪ್ರವಾಸ ಕುರಿತ ನಿಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸಾರ್ವಜನಿಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ...

ಭಾರತ ಪ್ರವಾಸ ಅನುಭವ ಹಂಚಿಕೆ: ಮೋದಿ ಕರೆಗೆ ಜನರಿಂದ ಭಾರಿ ಪ್ರತಿಕ್ರಿಯೆ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ಮೇ 31 ರಂದು ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಭಾರತ ಪ್ರವಾಸ ಕುರಿತ ನಿಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಿ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸಾರ್ವಜನಿಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾನುವಾರ ಆಕಾಶವಾಣಿಯಲ್ಲಿ 8ನೇ ಬಾರಿಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾತನಾಡಿದ್ದರು. ಕಾರ್ಯಕ್ರಮದಲ್ಲಿ ಬಡಜನರಿಗಾಗಿ ಸರ್ಕಾರದ ಕೆಲಸ ಹಾಗೂ ಅಭಿವೃದ್ಧಿ ಕಾರ್ಯ, ರೈತರ ಸಮಸ್ಯೆ, ಸರ್ಕಾರದ ಯೋಜನೆ, ಸಮಾನ ವೇತನ, ಸಮಾನ ದರ್ಜೆ ಯೋಜನೆ, ಭಾರತ ಪ್ರವಾಸ ಕುರಿತಂತೆ ಸಾಕಷ್ಟು ವಿಷಯಗಳ ಬಗ್ಗೆ ಮೋದಿ ಅವರು ಚರ್ಚೆ ನಡೆಸಿದ್ದರು. ಈ ವೇಳೆ ಪ್ರವಾಸದ ಕುರಿತಂತೆ ಮಾತನಾಡುವಾಗ ಪ್ರಧಾನಿ ಅವರು, ಭಾರತದ ಅದ್ಭುತ ಪ್ರವಾಸ ಕುರಿತಂತೆ ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ ಎಂದು ಸಾರ್ವಜನಿಕರಿಗೆ ಕರೆ ನೀಡಿದ್ದರು. ಪ್ರಧಾನಿ ಅವರ ಈ ಕರೆಗೆ ಸಾರ್ವಜನಿಕರಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜನರ ಪ್ರತಿಕ್ರಿಯೆಗೆ ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಅವರು, ಭಾರತದ ಅದ್ಭುತ ಪ್ರವಾಸ ಅನುಭವವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುವಂತೆ ಜನರಿಗೆ ನೀಡಿದ ಕರೆಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಭಾರತದ ಅದ್ಭುತ ಸ್ಥಳಗಳ ಫೋಟೋಗಳು ನನ್ನ ಟ್ವಿಟ್ಟರ್ ಖಾತೆಯಲ್ಲಿ ರಾರಾಜಿಸುತ್ತಿವೆ. ನನ್ನ ಫೇಸ್ ಬುಕ್ ಮುಖಪುಟದಲ್ಲಿ ಭಾರತದ ಅದ್ಭುತ ಸ್ಥಳಗಳ ಫೋಟೋಗಳು ಆಲ್ಬಮ್ ನಂತೆ ಕಾಣತೊಡಗಿದೆ. ಇದೇ ರೀತಿಯಾಗಿ ಫೋಟೋಗಳು ಹಾಗೂ ಅನುಭವಗಳನ್ನು ಹಂಚಿಕೆ ಮಾಡಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.