ದೇಶ

ಮ್ಯಾಗಿ ನೂಡಲ್ಸ್ ನಿಂದ ದೂರವಿರಿ: ಸೈನಿಕರಿಗೆ ರಕ್ಷಣಾ ಇಲಾಖೆ ಸಲಹೆ

ಖ್ಯಾತ ಶೀಘ್ರ ತಿನಿಸು ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.

ಮ್ಯಾಗಿ ನೂಡಲ್ಸ್ ನಿಂದ ದೂರವಿರಿ: ಸೈನಿಕರಿಗೆ ರಕ್ಷಣಾ ಇಲಾಖೆ ಸಲಹೆ
ಮ್ಯಾಗಿ ನೂಡಲ್ಸ್
Published On :

ನವದೆಹಲಿ: ಖ್ಯಾತ ಶೀಘ್ರ ತಿನಿಸು ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಪತ್ತೆಯಾದ ಹಿನ್ನಲೆಯಲ್ಲಿ ಮ್ಯಾಗಿಯಿಂದ ದೂರವಿರುವಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಸಲಹೆ ನೀಡಿದ್ದಾರೆ.

ಉತ್ತರಾಖಂಡ, ಬಿಹಾರ, ದೆಹಲಿ ರಾಜ್ಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಪತ್ತೆಯಾಗುತ್ತಿದ್ದಂತೆಯೇ ಮತ್ತು ಕೇಂದ್ರ ಸರ್ಕಾರ ಕೂಡ ಮ್ಯಾಗಿ ನೂಡಲ್ಸ್ ಪರೀಕ್ಷೆಗೆ ಮುಂದಾಗಿರುವ ಹಿನ್ನಲೆಯಲ್ಲಿ ರಕ್ಷಣಾ ಇಲಾಖೆಯ ಅಧಿಕಾರಿಗಳು ಸೈನಿಕರಿಗೆ ಮ್ಯಾಗಿ ಯಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ಸೇನಾ ಕ್ಯಾಂಟೀನ್ ಗಳಲ್ಲಿರುವ ಮ್ಯಾಗಿ ನೂಡಲ್ಸ್ ದಾಸ್ತಾನುಗಳನ್ನು ಮುಂದಿನ ಆದೇಶ ಬರುವವರೆಗೂ ಬಳಕೆ ಮಾಡದಂತೆ ಸೂಚಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿಯೂ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು ಪತ್ತೆಯಾದ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ ಆಹಾರ ಭದ್ರತಾ ಇಲಾಖೆಯ ಅಧಿಕಾರಿಗಳು ಮ್ಯಾಗಿ ಪರೀಕ್ಷೆಗೆ ಮುಂದಾಗಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಮ್ಯಾಗಿ ಸ್ಯಾಂಪಲ್ ಪ್ಯಾಕೆಟ್ ಗಳನ್ನು ಸಂಗ್ರಹಿಸಲಾಗಿದ್ದು, ಲ್ಯಾಬ್ ಗೆ ಕಳುಹಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಾಂಗ್ಲಾ ಬಳಿಕ ಗೋವಾದಲ್ಲಿಯೂ ಮ್ಯಾಗಿ ಪಾಸ್
ನಿನ್ನೆಯಷ್ಟೇ ಬಾಂಗ್ಲಾದೇಶ ಸರ್ಕಾರ ನಡೆಸಿದ್ದ ಪರೀಕ್ಷೆಯಲ್ಲಿ ಮ್ಯಾಗಿಯಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿಲ್ಲ ಎಂಬ ವರದಿ ಬಂದ ಬೆನ್ನಲ್ಲೇ ಗೋವಾ ಸರ್ಕಾರದಿಂದಲೂ ಮ್ಯಾಗಿಗೆ ಗ್ರೀನ್ ಸಿಗ್ನಲ್ ದೊರೆತಿದೆ. ಗೋವಾ ರಾಜ್ಯದ ಆಹಾರ ಭದ್ರತಾ ಅಧಿಕಾರಗಳು ಸಂಗ್ರಹಿಸಿದ್ದ ವಿವಿಧ ಸ್ಯಾಂಪಲ್ ಪ್ಯಾಕೆಟ್ ಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ ಸೀಸ ನಿಗದಿತ ಪ್ರಮಾಣದಲ್ಲಿಯೇ ಇದೆ ಎಂದು ವರದಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.