ಚಿನ್ನ 'ಕಳ್ಳಸಾಗಣೆ' ಆರೋಪ;ಏರ್ ಇಂಡಿಯಾ ವಿಮಾನ ಸಿಬ್ಬಂದಿ ಬಂಧನ
ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಇಂಡಿಯಾ ವಿಮಾನದ ಸಿಬ್ಬಂದಿಯನ್ನು ಜೆದ್ದಾ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ...

ನವದೆಹಲಿ: ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಏರ್ ಇಂಡಿಯಾ ವಿಮಾನದ ಸಿಬ್ಬಂದಿಯನ್ನು ಜೆದ್ದಾ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಸಿಬ್ಬಂದಿ ಇತರ 11 ಮಂದಿ ಸಿಬ್ಬಂದಿಗಳ ಜತೆ ಕೊಚ್ಚಿಗೆ ತೆರಳಬೇಕಿದ್ದ ವಿಮಾನಕ್ಕೆ ಹತ್ತಬೇಕಿತ್ತು. ಗುರುವಾರ ಬೆಳಗ್ಗೆ ವಿಮಾನ ಹೊರಡುವ ಹೊತ್ತಿಗೆ ಈ ಘಟನೆ ಬೆಳಕಿಗೆ ಬಂತು. ನಿಯಮದ ಪ್ರಕಾರ ಏರ್ ಇಂಡಿಯಾ ವಿಮಾನ ಹಾರಾಟ ನಡೆಸುವಾಗ 12 ಮಂದಿ ಸಿಬ್ಬಂದಿ ಕರ್ತವ್ಯ ನಿರ್ವಹಿಸಬೇಕು. ಆದರೆ ಸಿಬ್ಬಂದಿಯನ್ನು ಬಂಧಿಸಿದ್ದರಿಂದ 11 ಮಂದಿ ಸಿಬ್ಬಂದಿ ಮಾತ್ರ ವಿಮಾನ ಏರಿದರು.
''ನಮ್ಮ ಸಿಬ್ಬಂದಿ ಇನ್ನೂ ಬಂಧನದಲ್ಲಿದ್ದಾರೆ. ಬಂಧನಕ್ಕೆ ಕಾರಣಗಳು ತಿಳಿದುಬಂದಿಲ್ಲ. ಏರ್ ಇಂಡಿಯಾ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ'' ಎಂದು ಏರ್ ಇಂಡಿಯಾ ವೈಮಾನಿಕ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


