ದೇಶ

ನಿಷೇಧಾಜ್ಞೆಯ ನಡುವೆಯೂ ಸಿಖ್ ಯುವಕರ ಪ್ರತಿಭಟನೆ, ಜಮ್ಮುವಿನಲ್ಲಿ ಉದ್ವಿಗ್ನ ಪರಿಸ್ಥಿತಿ

ಖಲಿಸ್ತಾನಿ ಉಗ್ರಗಾಮಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಅವರ ಫೋಸ್ಟರ್ ತೆಗೆದುಹಾಕಿದ್ದನ್ನು ವಿರೋಧಿ ಸಿಖ್ ಯುವಕರು ನಡೆಸುತ್ತಿರುವ ಪ್ರತಿಭಟನೆ...

ನಿಷೇಧಾಜ್ಞೆಯ ನಡುವೆಯೂ ಸಿಖ್ ಯುವಕರ ಪ್ರತಿಭಟನೆ, ಜಮ್ಮುವಿನಲ್ಲಿ ಉದ್ವಿಗ್ನ ಪರಿಸ್ಥಿತಿ
ನಿನ್ನೆ ಪ್ರತಿಭಟನೆ ವೇಳೆ ಗಾಯಗೊಂಡ ಪೊಲೀಸ್ ಅಧಿಕಾರಿ
Published On :

ಜಮ್ಮು: ಖಲಿಸ್ತಾನಿ ಉಗ್ರಗಾಮಿ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆ ಅವರ ಫೋಸ್ಟರ್ ತೆಗೆದುಹಾಕಿದ್ದನ್ನು ವಿರೋಧಿ ಸಿಖ್ ಯುವಕರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮ್ಮುವಿನಲ್ಲಿ ಉದ್ವೀಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಷೇಧಾಜ್ಞೆಯ ನಡುವೆಯೂ ಜಮ್ಮು ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಸಿಖ್ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಜಮ್ಮುವಿನಲ್ಲಿ ಸೆಕ್ಷನ್ ೧೪೪ ಜಾರಿಗೊಳಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಶನಿವಾರದವರೆಗೆ ಜಮ್ಮುವಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆ ಪ್ರತಿಭಟನೆ ವೇಳೆ ಪೊಲೀಸ್ ಹಾಗೂ ಸಿಖ್ ಯುವಕರ ಗುಂಪಿನ ಮಧ್ಯ ನಡೆದ ಘರ್ಷಣೆಯಲ್ಲಿ ಓರ್ವ ಯುವಕ ಮೃತಪಟ್ಟು, ಇಬ್ಬರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದರು.

ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ಅನ್ನು ಕಿತ್ತುಹಾಕಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯದ ಯುವಕರು ದೊಣ್ಣೆ, ಚೂರಿ(ಕಿರ್ಪಾಣ್) ಹಿಡಿದುಕೊಂಡು ಪ್ರತಿಭಟನೆಗೆ ಇಳಿದಿದ್ದರು. ಇದು ಹಿಂಸಾಚಾರಕ್ಕೆ ತಿರುಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಕೆಲವು ಯುವಕರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.