ಆರ್. ಕೆ. ನಗರದಿಂದ ಜಯಲಲಿತಾ ನಾಮಪತ್ರ ಸಲ್ಲಿಕೆ
ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಚೆನ್ನೈ : ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಎರಡು ವಾರಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣವಚನ ಸ್ವೀಕರಿಸಿದ್ದರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದ ಜಯಲಲಿತಾ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರಾಗೃಹ ವಾಸ ಮಾಡಿದ್ದರು.
ನಂತರ ಕರ್ನಾಟಕ ಹೈ ಕೋರ್ಟ್ ಜಯಲಲಿತಾ ನಿರಪರಾಧಿ ಎಂದು ಕ್ಲೀನ್ ಚಿಟ್ ನೀಡಿತ್ತು. ನಂತರ ಜಯಲಲಿತಾ ಮೇ 23 ರಂದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇದಾದ ನಂತರ ಶಾಸಕ ಪಿ. ವಟ್ರಿವೇಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್.ಕೆ ನಗರ ವಿಧಾನಸಭಾ ಕ್ಷೇತ್ರವನ್ನು ಜಯಲಲಿತಾಗಾಗಿ ತೆರವುಗೊಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


