ರಾಹುಲ್ ಗಾಂಧಿ ಭೇಟಿ ಮಾಡಿದ ಸಿಎಂ ನಿತೀಶ್ ಕುಮಾರ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ...

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ವರ್ಷದ ಅಂತ್ಯಕ್ಕೆ ಬಿಹಾರ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಈ ಸಂಬಂಧ ನವದೆಹಲಿಯಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ನಿತೀಶ್ ಕುಮಾರ್ ಉಭಯ ಪಕ್ಷಗಳ ಮೈತ್ರಿ ಕುರಿತಂತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಜನತ ಪರಿವಾರ ಒಕ್ಕೂಟದ ಮುಖ್ಯಸ್ಥರಾಗಿರುವ ನಿತೀಶ್ ಕುಮಾರ್ ಅವರು ಮೈತ್ರಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಹೇಳಿದ್ದರು.
ಬಿಹಾರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚುಟುವಟಿಕೆಗಳಲ್ಲಿ ಬಿರುಸು ಪಡೆದುಕೊಂಡಿದೆ. ಬಿಹಾರ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಕಾಂಗ್ರೆಸ್ ವರಿಷ್ಠರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


