ಬಾಂಗ್ಲಾದ ಢಾಕೇಶ್ವರಿ ದೇವಾಲಯ, ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ
ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಢಾಕಾ: ಬಾಂಗ್ಲಾದೇಶದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ(ಜೂ.7 )ರಂದು ಬಾಂಗ್ಲಾದ ರಾಷ್ಟ್ರೀಯ ದೇವಸ್ಥಾನ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸಮಿತಿ ಸದಸ್ಯರನ್ನು ಪ್ರಧಾನಿ ಭೇಟಿ ಮಾಡಿದ್ದಾರೆ. ಈ ವೇಳೆ ದೇವಾಲಯ ಸಮಿತಿಯಿಂದ ಪ್ರಧಾನಿಗೆ ನೆನಪಿನ ಕಾಣಿಕೆ ನೀಡಲಾಯಿತು. ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿದ್ದು ಅಲ್ಲಿನ ಸನ್ಯಾಸಿಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸಿದ್ದಾರೆ. ಕಳೆದ ತಿಂಗಳು ಕೋಲ್ಕತಾದಲ್ಲಿರುವ ರಾಮಕೃಷ್ಣ ಮಠಕ್ಕೆ ತೆರಳಿದ್ದ ಪ್ರಧಾನಿಗೆ ಭವ್ಯ ಸ್ವಾಗತ ದೊರೆತಿತ್ತು. ಬಾಂಗ್ಲಾದಲ್ಲಿರುವ ರಾಮಕೃಷ್ಣ ಮಠದಲ್ಲೂ ಸಹ ಪ್ರಧಾನಿ ಮೋದಿ ಅವರನ್ನು ಅದ್ಧೂರಿಯಿಂದ ಸ್ವಾಗತಿಸಲಾಯಿತು.
ಪ್ರವಾಸದ ಅಂತಿಮ ದಿನವಾದ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಪ್ರಧಾನಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ 'ಫ್ರೆಂಡ್ ಆಫ್ ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪಡೆದುಕೊಳ್ಳಲಿದ್ದಾರೆ. ಬಾಂಗ್ಲಾದ ರಾಜಕೀಯ ಗಣ್ಯರು ಹಾಗೂ ಉದ್ಯಮಿಗಳನ್ನು ಭೇಟಿ ಮಾಡಿ ಬಂಗಬಂಧು ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ಭಾಷಣ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಸಂಜೆ ವೇಳೆಗೆ ಭಾರತಕ್ಕೆ ವಾಪಸ್ಸಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


