ಮೋಹನ್ ಭಾಗವತ್‌ಗೆ ಝೆಡ್‌ಪ್ಲಸ್ ಭದ್ರತೆ
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೇಂದ್ರ ಸರ್ಕಾರ ಝೆಡ್ ಪ್ಲಸ್ ಭದ್ರತೆ ಒದಗಿಸಿದ್ದು...

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಕೇಂದ್ರ ಸರ್ಕಾರ ಝೆಡ್ ಪ್ಲಸ್ ಭದ್ರತೆ ಒದಗಿಸಿದ್ದು, ಇನ್ನು ಮುಂದೆ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ ಕಮಾಂಡೋಗಳಿಂದ ರಕ್ಷಣೆ ಪಡೆಯಲಿದ್ದಾರೆ.
ಕೇಂದ್ರ ಗೃಹ ಇಲಾಖೆ ಸಿಐಎಸ್‌ಎಫ್ ಕಮಾಂಡೋಗೆ ಭದ್ರತೆಯ ಜವಾಬ್ದಾರಿ ವಹಿಸಿದ್ದು, ಸಿಐಎಸ್‌ಎಫ್‌ನ 60 ಯೋಧರು ಮೋಹನ್ ಭಾಗವತ್ ಅವರಿಗೆ ಭದ್ರತೆ ಒದಗಿಸಲಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥನಿಗೆ ಬೆದರಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಭಾಗವತ್ ಅವರು ನಾಗ್ಪುರದ ಆರ್ಎಸ್ಎಸ್ ಕಚೇರಿಯಲ್ಲಿರುವಾಗ ಹಾಗೂ ಮಹಾರಾಷ್ಟ್ರ ಸೇರಿದಂತೆ ಇತರೆ ಕಡೆ ಪ್ರಯಾಣ ಬೆಳೆಸುವಾಗ ಸಿಐಎಸ್ಎಫ್ ಕಮಾಂಡೋಗಳು ಭದ್ರತೆ ಒದಗಿಸಲಿದ್ದಾರೆ.
ಆರ್‌ಎಸ್‌ಎಸ್ ಸರಸಂಘಚಾಲಕರಿಗೆ ಮುಸ್ಲಿಂ ಮೂಲಭೂತವಾದಿಗಳಿಂದ ಪ್ರಾಣ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿತ್ತು. ಹೀಗಾಗಿ ಮಹಾರಾಷ್ಟ್ರ ಪೊಲೀಸರು ಒದಗಿಸಿರುವ ಭದ್ರತೆ ಸಾಲದು ಎಂದು ಕೇಂದ್ರ ಗೃಹ ಸಚಿವಾಲಯ ಅವರಿಗೆ ಝೆಡ್‌ಪ್ಲಸ್ ಭದ್ರತೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


