ವಾಡಿಕೆಯಂತೇ ಮಳೆ; ಹವಾಮಾನ ಇಲಾಖೆಯ ಭವಿಷ್ಯ ಸುಳ್ಳು..!
ಈ ಬಾರಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆ ಸುರಿಯಲಿದೆ ಎಂಬ ಕೇಂದ್ರ ಹವಾಮಾನ ಇಲಾಖೆ ನೀಡಿರುವ ವರದಿಯನ್ನು ಅಲ್ಲಗಳೆದಿರುವ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ವಾಡಿಕೆಯಂತೆ ಮಳೆ ಸುರಿಯಲಿದೆ..

ನವದೆಹಲಿ: ಈ ಬಾರಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆ ಸುರಿಯಲಿದೆ ಎಂಬ ಕೇಂದ್ರ ಹವಾಮಾನ ಇಲಾಖೆ ನೀಡಿರುವ ವರದಿಯನ್ನು ಅಲ್ಲಗಳೆದಿರುವ ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ವಾಡಿಕೆಯಂತೆ ಮಳೆ ಸುರಿಯಲಿದೆ ಎಂದು ಹೇಳಿದೆ.
ದೇಶದ ಏಕೈಕ ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆಯಾಗಿರುವ ಸ್ಕೈಮೆಟ್ ಭಾರತದಲ್ಲಿ ಮುಂಗಾರುಮಳೆ ಸಾಮಾನ್ಯದಂತೆಯೇ ಸುರಿಯಲಿದ್ದು, ಎಲ್ ನಿನೋ ಪರಿಣಾಮದಿಂದಾಗಿ ಮಳೆ ಅಭಾವ ಎದುರಾಗುತ್ತದೆ ಎಂಬ ಹವಾಮಾನ ಇಲಾಖೆಯ ನೀಡಿದ್ದ ವರದಿಯನ್ನು ಸ್ಕೈಮೇಟ್ ಅಲ್ಲಗಳೆದಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ದೀರ್ಘಾವಧಿಯಲ್ಲಿ ಶೇ.102ರಷ್ಟು ಮಳೆ ಸುರಿಯಲಿದೆ. ಈ ಹಿಂದೆ 1967, 1977, 1997 ಮತ್ತು 2006ರಲ್ಲಿ ಎಲ್‌ನಿನೋ ಪ್ರಭಾವ ಕಾಣಿಸಿಕೊಂಡಿದ್ದರೂ, ಅರಬ್ಬೀ ಸಮುದ್ರದಲ್ಲಿ ಪೂರಕ ವಾತಾವರಣ ಸೃಷಿಯಿಂದ ಸಾಮಾನ್ಯ ಮುಂಗಾರು ಸುರಿದಿತ್ತು ಎಂದು ಸ್ಕೈಮೆಟ್‌ನ ಮುಖ್ಯ ಹವಾಮಾನ ಶಾಸ್ತ್ರಜ್ಞ ಜಿ.ಪಿ. ಶರ್ಮಾ ಹೇಳಿದ್ದಾರೆ.
ಅಲ್ಲದೆ ತಮ್ಮ ಈ ವರದಿಯನ್ನು ಸಮರ್ಥಿಸಿಕೊಂಡಿರುವ ಸ್ಕೈಮೇಟ್ ಸಂಸ್ಥೆ ತಾವು ಕಳೆದ ಮೂರು ವರ್ಷಗಳಿಂದ ನೀಡುತ್ತಿರುವ ಹವಾಮಾನ ಮುನ್ಸೂಚನೆ ನಿಖರವಾಗಿದೆ ಎಂದು ಹೇಳಿದೆ.
ಈ ಹಿಂದೆ ಕೇಂದ್ರ ಹವಾಮಾನ ಇಲಾಖೆ ನೀಡಿದ್ದ ವರದಿಯನ್ವಯ ಪ್ರಸಕ್ತ ಸಾಲಿನ ಋತುವಿನಲ್ಲಿ ಶೇ.88ರಷ್ಟು ಮಳೆ ಸುರಿಯಲಿದ್ದು, ಬರಗಾಲದ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿತ್ತು. ಆದರೆ ಸ್ಕೈಮೆಟ್ ಸಂಸ್ಥೆ ಬಿಡುಗಡೆ ಮಾಡಿರುವ ನೂತನ ವರದಿಯು ಇದನ್ನು ಅಲ್ಲಗಳೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


