ದೇಶ

ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ

ದೆಹಲಿಯ ಕರ್ಕರ್ ಡೂಮ ಪ್ರದೇಶದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಕೊಂಡಿರುವುದಾಗಿ ತಿಳಿದುಬಂದಿದೆ...

ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ
ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ (ಸಾಂದರ್ಭಿಕ ಚಿತ್ರ)
Published On :

ನವದೆಹಲಿ: ದೆಹಲಿಯ ಕರ್ಕರ್ ಡೂಮ ಪ್ರದೇಶದ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಕೊಂಡಿರುವುದಾಗಿ ತಿಳಿದುಬಂದಿದೆ.

ಇಂದು ಬೆಳಿಗ್ಗೆ 9.45ರ ಸುಮಾರಿಗೆ ಕರ್ಕರ್ ಡೂಮ ಪ್ರದೇಶದ ವಾಣಿಜ್ಯ ಕಟ್ಟಡದ 6 ಅಂತಸ್ತಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿಬಂದಿದ್ದು, ಘಟನೆಗೆ ಪ್ರಮುಖ ಕಾರಣ ಈವರೆಗೂ ತಿಳಿದುಬಂದಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆ 5 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ಆರಂಭಿಸಲಾಯಿತು. ನಂತರ ಮತ್ತೆ 10 ವಾಹನಗಳನ್ನು ಕರೆಸಿಕೊಳ್ಳಲಾಯಿತು. ಘಟನೆಯಲ್ಲಿ ಯಾವುದೇ ಸಾವು, ನೋವುಗಳಾಗಿರುವಂತೆ ತಿಳಿದುಬಂದಿಲ್ಲ. ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಫೊರೆನ್ಸಿಕ್ ತಜ್ಞರು ಭೇಟಿ ನೀಡಿದ್ದು, ಸ್ಥಳದಿಂದ ಕೆಲವು ಮಾದರಿ ವಸ್ತುಗಳನ್ನು ಪಡೆದು ಪರೀಕ್ಷೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. . 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.