ಎನ್ ಎಸ್ ಜಿ ಮುಖ್ಯಸ್ಥರಾಗಿ ಆರ್ ಸಿ ತಾಯಲ್ ನೇಮಕ
ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಪಡೆ (ಎನ್ ಎಸ್ ಜಿ)ಯ ನೂತನ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಆರ್ ಸಿ ತಾಯಲ್ ಅವರು ಸೋಮವಾರ ನೇಮಕಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಕೇಂದ್ರ ಗೃಹ ಇಲಾಖೆಯು ಹೊರಡಿಸಿರುವ ಅಧಿಕೃತ ಆದೇಶದಲ್ಲಿ ಎನ್ ಎಸ್ ಜಿ ಮುಖ್ಯಸ್ಥ ಹುದ್ದೆಗೆ ಆರ್ ಸಿ ತಾಯಲ್ ಅವರ ಹೆಸರನ್ನು ಆಯ್ಕೆ ಮಾಡಲಾಗಿದೆ. 1980ರ ಬ್ಯಾಚ್ ನ ಮೇಘಾಲಾಯ ಕೇಡರ್ ನ ಐಪಿಎಸ್ ಅಧಿಕಾರಿ ತಾಯಲ್ ಅವರು, ಪ್ರಸ್ತುತ ಜಮ್ಮು ಕಾಶ್ಮೀರದಲ್ಲಿರುವ ಪ್ಯಾರಾಮಿಲಿಟರಿ ಸಿಆರ್ ಪಿಎಫ್ ಪಡೆಗಳ ವಿಶೇಷ ಡಿಜಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಕೇಂದ್ರ ಗೃಹ ಇಲಾಖೆ ಅವರನ್ನು ಎನ್ ಎಸ್ ಜಿ ಮುಖ್ಯಸ್ಥರನ್ನಾಗಿ ನೇಮಿಸಿದ್ದು, ಮುಂಬರುವ 2016 ಆಗಸ್ಟ್ ತಿಂಗಳವರೆಗೂ ಅವರು ತಮ್ಮ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
ಹರ್ಯಾಣ ಮೂಲದ ತಾಯಲ್ ಅವರು, ಸಹಸ್ರ ಸೀಮಾ ದಳ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಮುಂದಿನವಾರ ಎನ್ ಎಸ್ ಜಿ ಮುಖ್ಯಸ್ಥರಾಗಿ ತಾಯಲ್ ಅವರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದಿನ ಮುಖ್ಯಸ್ಥರಾಗಿದ್ದ ಜೆಎನ್ ಚೌದರಿ ಅವರು ಕಳೆದ ಮೇ 31ರಂದು ನಿವೃತ್ತರಾಗಿದ್ದರು. ಬಳಿಕ ಈ ಸ್ಥಾನ ಖಾಲಿ ಉಳಿದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


