ಮದ್ರಾಸ್ ಹೈಕೋರ್ಟ್ ನಿಂದ ಮಾರನ್ ಸಹೋದರರ ಅರ್ಜಿ ವಜಾ
2ಜಿ ಪ್ರಕರಣದಲ್ಲಿ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾರನ್ ಸಹೋದರರಿಗಾ ಭಾರಿ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ..

ಚೆನ್ನೈ: 2ಜಿ ಪ್ರಕರಣದಲ್ಲಿ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾರನ್ ಸಹೋದರರಿಗಾ ಭಾರಿ ಹಿನ್ನಡೆಯಾಗಿದ್ದು, ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಮಾರನ್ ಸಹೋದರರು ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
2ಜಿ ಪ್ರಕರಣದ ಏರ್ ಸೆಲ್-ಮ್ಯಾಕ್ಸಿಸ್ ಸಂಸ್ಥೆಗಳ ನಡುವಿನ ಒಪ್ಪಂದದಲ್ಲಿ ಭಾರಿ ಅಕ್ರಮವೆಸಗಲಾಗಿದೆ ಎಂಬ ಆರೋಪದ ಮೇಲೆ ಜಾರಿನಿರ್ದೇಶನಾಲಯ ಮಾರನ್ ಸಂಸ್ಥೆಗೆ ಸೇರಿದ ಸುಮಾರು 742 ಕೋಟಿ ರು. ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಜಾರಿ ನಿರ್ದೇಶನಾಲಯದ ಈ ಕ್ರಮವನ್ನು ಪ್ರಶ್ನಿಸಿ ಮಾರನ್ ಸಹೋದರರು ಮದ್ರಾಸ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆಯನ್ನು ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ಮಾರನ್ ಸಹೋದರರ ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಪ್ರಕರಣವನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಪ್ರಕರಣ ಸಂಬಂಧ ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ತಾವು ಮಧ್ಯಪ್ರವೇಶಿಸುವುದು ಸರಿಯಲ್ಲ. ಹೀಗಾಗಿ ಅರ್ಜಿದಾರರು ಬಯಸಿದರೆ ಮೇಲಂತಸ್ತಿನ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಲಹೆ ನೀಡಿದೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಕಳಾನಿಧಿ ಮಾರನ್ ಮತ್ತು ದಯಾನಿಧಿ ಮಾರನ್ ಅವರ ಒಡೆತನವಿರುವ ಸಂಸ್ಥೆಗಳ ಮೇಲೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಯಲದ ಅಧಿಕಾರಿಗಳು ಸನ್ ಸಮೂಹ ಸಂಸ್ಥೆಗೆ ಸೇರಿದ ಸುಮಾರು 750ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಿದ್ದರು. ಇನ್ನು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮೂಲಗಳ ಪ್ರಕಾರ ಅಂದಿನ ಟೆಲಿಕಾಮ್ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ತಮ್ಮ ಸಚಿವಾಲಯವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಏರ್ ಸೆಲ್-ಮಲೇಷ್ಯಾ ಮೂಲದ ಮ್ಯಾಕ್ಸಿಸ್ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಇದಕ್ಕಾಗಿ ಮಾರನ್ ಅವರು ಮ್ಯಾಕ್ಸಿಸ್ ಸಂಸ್ಥೆಯಿಂದ ಭಾರಿ ಪ್ರಮಾಣದಲ್ಲಿ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪಗಳು ಕೇಳಿಬಂದಿತ್ತು. ಹೀಗಾಗಿ ಮಾರನ್ ಸಹೋದರರ ವಿರುದ್ಧ ಹವಾಲ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


