ದೇಶ

ಯೋಗ ದಿನಕ್ಕೆ ಮೈಕ್ರೋಸೈಟ್: ಫೇಸ್ ಬುಕ್, ಟ್ವಿಟರ್ ನಲ್ಲಿ ಆಸನಗಳ ವಿಡಿಯೋ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಂದ್ರ ಸರ್ಕಾರ, ಜೂ.10 ರಂದು ಯೋಗ ದಿನಕ್ಕಾಗಿ ಮೈಕ್ರೋಸೈಟ್ ನ್ನು ಬಿಡುಗಡೆ ಮಾಡಿದೆ.

ಯೋಗ ದಿನಕ್ಕೆ ಮೈಕ್ರೋಸೈಟ್: ಫೇಸ್ ಬುಕ್, ಟ್ವಿಟರ್ ನಲ್ಲಿ ಆಸನಗಳ ವಿಡಿಯೋ
ಯೋಗ ದಿನಕ್ಕಾಗಿ ರೂಪಿಸಲಾಗಿರುವ ಮೈಕ್ರೋಸೈಟ್
Published On :

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕೇಂದ್ರ ಸರ್ಕಾರ, ಜೂ.10 ರಂದು ಯೋಗ ದಿನಕ್ಕಾಗಿ ಮೈಕ್ರೋಸೈಟ್ ನ್ನು ಬಿಡುಗಡೆ ಮಾಡಿದೆ.

ವಿದೇಶಾಂಗ ವ್ಯವಹಾರ ಖಾತೆ ವೆಬ್ ಸೈಟ್ ನ ಭಾಗವಾಗಿರುವ ಮೈಕ್ರೋಸೈಟ್ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.  ಇದರಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜೂ.21 ರಂದು ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿ ಇದೆ.   ಮೈಕ್ರೋ ಸೈಟ್ ನಲ್ಲಿ ಯೋಗಕ್ಕೆ ಸಂಬಂಧಿಸಿದ ಶಶಾಂಕಾಸನದ ವಿಡಿಯೋ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಯೋಗ ಕ್ರಿಯೆಯಲ್ಲಿ ಇದು ಮಾದರಿ ಅಸನವಾಗಿದ್ದು ಈ ಆಸನದಿಂದಾಗಿ ಒತ್ತಡ ಮತ್ತು ಕೋಪ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ಯೋಗ ದಿನವನ್ನು ಆಚರಿಸಲು ಭಾರತೀಯ ಸೇನೆ ಸಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಜೂ.21 ರಂದು ನವದೆಹಲಿಯ ರಾಜಪಥದಲ್ಲಿ ನಡೆಯಲಿರುವ ಸಾಮೂಹಿಕ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾರತ-ಅಮೇರಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಪ್ರಧಾನಿ  ನರೇಂದ್ರ ಮೋದಿ ಸಹ ರಾಜಪಥದಲ್ಲಿ ಯೋಗ ಪ್ರದರ್ಶನ ಮಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಮೋದಿ ರಾಜಪಥದಲ್ಲಿ ಯೋಗ ಪ್ರದರ್ಶನ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.