ದೇಶ

ತೋಮರ್ ನಕಲಿ ಪದವಿ ಪ್ರಕರಣ: ಕೇಜ್ರಿವಾಲ್ ರಾಜಿನಾಮೆಗೆ ಆಗ್ರಹಿಸಿ 'ಕೈ' ಪ್ರತಿಭಟನೆ

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ನಕಲಿ ಪದವಿ ಪ್ರಕರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತೀವ್ರ...

ತೋಮರ್ ನಕಲಿ ಪದವಿ ಪ್ರಕರಣ: ಕೇಜ್ರಿವಾಲ್ ರಾಜಿನಾಮೆಗೆ ಆಗ್ರಹಿಸಿ 'ಕೈ' ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರ ನಕಲಿ ಪದವಿ ಪ್ರಕರಣ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದು, ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದೆ.

ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಮಾಕೇನ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಸಿ.ಚಾಕೋ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಜ್ರಿವಾಲ್ ರಾಜಿನಾಮೆಗೆ ಒತ್ತಾಯಿಸಿ ದೆಹಲಿ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಕೇನ್, ದೆಹಲಿ ಸಿಎಂ ಕೇಜ್ರಿವಾಲ್ 'ಅಧಿಕಾರದ ಅಮಲಿನಲ್ಲಿ ಮುಳುಗಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

'ತಮ್ಮ ಪಕ್ಷದವೇ ತೋಮರ್ ಅವರ ಪದವಿ ನಕಲಿ ಎಂದು ಹೇಳುತ್ತಿದ್ದರೂ ಕೇಜ್ರಿವಾಲ್ ಅವರು ಅದನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ತೋಮರ್ ಅವರ ನಕಲಿ ಪ್ರಕರಣಕ್ಕೆ ಕೇಜ್ರಿವಾಲ್ ಅವರೇ ನೇರ ಹೊಣೆಯಾಗಿದ್ದು, ಈ ಕೂಡಲೇ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು' ಎಂದು ಮಾಕೇನ್ ಒತ್ತಾಯಿಸಿದ್ದಾರೆ.

ಕಾನೂನು ಬಾಹಿರವಾಗಿ ಕಾನೂನು ಪದವಿ ಪಡೆದ ಆರೋಪದ ಹಿನ್ನೆಲೆಯಲ್ಲಿ ತೋಮರ್ ಅವರನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.