ದೇಶ

ನೇಪಾಳದಲ್ಲಿ ಭೂಕುಸಿತ: 47 ಸಾವು, ಹಲವರು ನಾಪತ್ತೆ

ನೇಪಾಳದ ತಪ್ಲೆಜಂಗ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಕನಿಷ್ಠ 47 ಮಂದಿ ಮೃತಪಟ್ಟಿದ್ದಾರೆ ಮತ್ತು 80ಕ್ಕೂ ಹೆಚ್ಚು ಮಂದಿ...

ನೇಪಾಳದಲ್ಲಿ ಭೂಕುಸಿತ: 47 ಸಾವು, ಹಲವರು ನಾಪತ್ತೆ
ಸಾಂದರ್ಭಿಕ ಚಿತ್ರ
Published On :

ಕಠ್ಮಂಡು: ನೇಪಾಳದ ತಪ್ಲೆಜಂಗ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಕನಿಷ್ಠ 47 ಮಂದಿ ಮೃತಪಟ್ಟಿದ್ದಾರೆ ಮತ್ತು 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ ಸಂಭವಿಸಿದ ಭೂಕುಸಿತದಿಂದಾಗಿ ಹಲವರು ನಾಪತ್ತೆಯಾಗಿದ್ದಾರೆ. ಈವರೆಗೆ 16 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೂಕುಸಿತ ಸಂಭವಿಸಿದ ಸ್ಥಳ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಅಲ್ಲಿಗೆ ತಲುಪಲು ಕನಿಷ್ಠ ಒಂಬತ್ತು ಗಂಟೆಗಳ ಸಮಯ ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

'ಈಗಾಗಲೇ 16 ಮೃತದೇಹಳು ಪತ್ತೆಯಾಗಿದ್ದು, ಇನ್ನು 50ಕ್ಕೂ ಹೆಚ್ಚು ಜನ ಭೂಕುಸಿತದಲ್ಲಿ ಸಿಲುಕಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿರುವುದಾಗಿ' ತೆಪ್ಲೆಜಂಗ್ ಜಿಲ್ಲಾ ಸಹಾಯಕ ಮುಖ್ಯ ಅಧಿಕಾರಿ ಪ್ರಸಾದ್ ಭಟ್ಟಾರಿಯಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.