ಬಂಡುಕೋರರ ವಿರುದ್ಧದ ಕಾರ್ಯಾಚರಣೆ ಭಾರತದ ಬದಲಾದ ಮನಸ್ಥಿತಿ ತೋರಿಸುತ್ತೆ: ಪರಿಕ್ಕರ್
ಮಣಿಪುರದಲ್ಲಿ ಸೈನಿಕರ ಮೇಲೆ ನಡೆದ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಮ್ಯಾನ್ಮಾರ್ ನಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ....

ನವದೆಹಲಿ: ಮಣಿಪುರದಲ್ಲಿ ಸೈನಿಕರ ಮೇಲೆ ನಡೆದ ದಾಳಿಯ ಬೆನ್ನಲ್ಲೇ ಭಾರತೀಯ ಸೇನೆ ಮ್ಯಾನ್ಮಾರ್ ನಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ ಬದಲಾದ ಭಾರತದ ಮನಸ್ಥಿತಿ ಹಾಗೂ ಉಗ್ರರ ವಿರುದ್ಧದ ಸ್ಪಷ್ಟ ನಿಲುವನ್ನು ತೋರಿಸುತ್ತೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೈನಿಕರು ತಮ್ಮ ಗಡಿಯನ್ನು ಪ್ರವೇಶಿಸಿಲ್ಲ ಎಂದು ಮ್ಯಾನ್ಮಾರ್ ಹೇಳಿಕೊಂಡಿದೆ. ಆದರೆ ಭಾರತೀಯ ಸೇನೆ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಶಿಬಿರಗಳು ನಾಶವಾಗಿರುವುದನ್ನು ಭಾರತ ಘಂಟಾಘೋಷವಾಗಿ ಹೇಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೈನಿಕರಿಂದ ಹೇಗೆ ಕಾರ್ಯಾಚರಣೆ ನಡೆಸಬೇಕು ಎಂಬುದನ್ನು ನೋಡಿ ಕಲಿತಿದ್ದೇವೆ ಎಂದು ಮ್ಯಾನ್ಮಾರ್ ಸೇನೆ ಹೇಳಿದೆ. ನೆರೆಯ ರಾಷ್ಟ್ರಗಳು ನಮ್ಮ ಪ್ರದೇಶವನ್ನು ಬಳಸಿಕೊಂಡು ಯಾವುದೇ ಸಮಸ್ಯೆ ಸೃಷ್ಟಿಸಿದರೇ ಅದನ್ನು ನೋಡಿಕೊಂಡು ಸುಮ್ಮನಿರುವುದಿಲ್ಲ ಎಂದು. ಮ್ಯಾನ್ಮಾರ್ ಅಧ್ಯಕ್ಷರ ಕಚೇರಿ ನಿರ್ದೇಶಕ ಝಾವ್ ಹಿತೇ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆ 2 ಭಯೋತ್ಪಾದಕರ ಶಿಬಿರ ನಾಶಪಡಿಸಿರುವುದನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ. ಆದರೆ ಕಾರ್ಯಾಚರಣೆ ಬಗ್ಗೆ ವಿವರಣೆ ನೀಡಲು ಅವರು ನಿರಾಕರಿಸಿದ್ದಾರೆ.
ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಚಿವ ಜಿತೇಂದ್ರ ಸಿಂಗ್ ಅವರನ್ನು ಮಣಿಪುರಕ್ಕೆ ಭೇಟಿ ನೀಡಿ ಪರಿಸ್ಥಿತ ಅವಲೋಕಿಸಿ ವರದಿ ನೀಡುವಂತೆ ತಿಳಿಸಿದೆ.
ಒಟ್ಟಿನಲ್ಲಿ ಭಾರತೀಯ ಸೈನಿಕರಿಂದ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಹಲವು ಗೊಂದಲ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


