ದೇಶ

ಸೋಮನಾಥ್ ಭಾರ್ತಿ ವಿರುದ್ಧ ಬಿಜೆಪಿ ಮಹಿಳಾ ಘಟಕ ಪ್ರತಿಭಟನೆ

ಆಪ್ ಮುಖಂಡ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿ ಬಿಜೆಪಿ ಮಹಿಳಾ ಘಟಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿತು.

ಸೋಮನಾಥ್ ಭಾರ್ತಿ ವಿರುದ್ಧ ಬಿಜೆಪಿ ಮಹಿಳಾ ಘಟಕ ಪ್ರತಿಭಟನೆ
ದೆಹಲಿ ಸಿಎಂ ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ ಮಹಿಳಾ ಘಟಕದ ಪ್ರತಿಭಟನೆ
Published On :

ನವದೆಹಲಿ: ಆಪ್ ಮುಖಂಡ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿ ಬಿಜೆಪಿ ಮಹಿಳಾ ಘಟಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿತು.

ಈ ಸಂಬಂಧ ಸೋಮನಾಥ್ ಭಾರ್ತಿ ಪತ್ನಿ ಲಿಪಿಕಾ ಮಿತ್ರ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮಹಿಳಾ ಕಾರ್ಯಕರ್ತರು ಸೋಮನಾಥ್ ಭಾರ್ತಿ ಕಾರು ತಡೆದು, ಅವರ ವಿರುದ್ಧ ಧಿಕ್ಕಾರ ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದರು.

 ಸೋಮನಾಥ್ ಭಾರ್ತಿ ಅವರ ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಅವರಿಗಿರುವ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್  ಬಸ್ಸಿ  ಭರವಸೆ ನೀಡಿದರು. ಈ ನಡುವೆ ದೆಹಲಿ ಮಹಿಳಾ ಆಯೋಗ ಸೋಮನಾಥ್ ಭಾರ್ತಿಗೆ ನೋಟೀಸ್ ನೀಡಿದ್ದು ಉತ್ತರಿಸುವಂತೆ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.