ದೇಶ

ಕದನ ವಿರಾಮ ಉಲ್ಲಂಘಿಸಿದ ಪಾಕ್, ಭಾರತ ಪ್ರತಿದಾಳಿ

ಭಾರತ ಮಯನ್ಮಾರ್ ಗಡಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ....

ಕದನ ವಿರಾಮ ಉಲ್ಲಂಘಿಸಿದ ಪಾಕ್, ಭಾರತ ಪ್ರತಿದಾಳಿ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಭಾರತ ಮಯನ್ಮಾರ್ ಗಡಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುವ ಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ  ಕದನ ವಿರಾಮ ಉಲ್ಲಂಘಿಸಿ, ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ದಾಳಿ ನಡಿಸಿದೆ.

 ಜಮ್ಮುವಿನ ಪೂಂಚ್ ಜಿಲ್ಲೆಯ ಸೌಜ್ಜನ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ದೇಶದಲ್ಲಿ ಪಾಕಿಸ್ತಾನ ಸೇನಾ ಪಡೆಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆಯೂ ತಕ್ಕ ಪ್ರತಿದಾಳಿ ನಡೆಸಿದೆಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಭಾರತ- ಪಾಕ್ ಸೈನಿಕರ ನಡುವೆ ಸುಮಾರು ಹತ್ತು ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಭಾರತೀಯ ಸೈನಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು  ಜಮ್ಮು ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ  ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.