ದೇಶ

ಎಐಪಿಎಂಇಟಿ ಪ್ರಶ್ನೆ ಪತ್ರಿಕೆ ಸೋರಿಕೆ: ಜೂ.15ಕ್ಕೆ ಸುಪ್ರೀಂ ತೀರ್ಪು

ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತೀರ್ಪನ್ನು ಜೂನ್.15 ನೀಡುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ...

ಎಐಪಿಎಂಇಟಿ ಪ್ರಶ್ನೆ ಪತ್ರಿಕೆ ಸೋರಿಕೆ: ಜೂ.15ಕ್ಕೆ ಸುಪ್ರೀಂ ತೀರ್ಪು
ಸುಪ್ರೀಂಕೋರ್ಟ್
Published On :

ನವದೆಹಲಿ: ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತೀರ್ಪನ್ನು ಜೂನ್.15 ನೀಡುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.

ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾ.ಆರ್.ಕೆ.ಆಗರ್ ವಾಲ್ ಮತ್ತು ಅಮಿತಾವ್ ರಾಯ್ ಅವರಿದ್ದ ಪೀಠ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ಗಂಭೀರ ವಿಚಾರವಾಗಿದ್ದು, ವಿಚಾರಣೆ ಧೀರ್ಘಕಾಲ ನಡೆಸಬೇಕಿದ್ದು, ಈ ಕುರಿತ ತೀರ್ಪನ್ನು ಜೂ.15ಕ್ಕೆ ನೀಡಲಾಗುವುದು ಎಂದು ಹೇಳಿದೆ.

ಮೇ 3 ರಂದು ನಡೆದ ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷೆ (ಎಐಪಿಎಂಟಿ)ಯ ಪ್ರಶ್ನೆ ಪತ್ರಿಕೆಗಳು ಬಿಹಾರ, ಜಾರ್ಖಂಡ್, ರಾಜಸ್ಥಾನ, ಹರಿಯಾಣ ಸೇರಿದಂತೆ ಇನ್ನಿತರೆ ರಾಜ್ಯಗಳಲ್ಲಿ ಮೊಬೈಲ್ ಮೂಲಕ ಬಹಿರಂಗವಾಗಿದ್ದವು. ಪ್ರಕರಣದ ಅರ್ಜಿದಾರರಲ್ಲೊಬ್ಬರಾದ ಪ್ರಶಾಂತ್‌ಭೂಷಣ್‌ ಫ‌ಲಾನುಭವಿಗಳನ್ನು ಕಂಡುಹಿಡಿಯುವುದು ಕಷ್ಟಕರವಾದ್ದರಿಂದ ಮರುಪರೀಕ್ಷೆ ನಡೆಸುವುದೇ ಒಳಿತು ಎಂದು ಸಲಹೆ ನೀಡಿದ್ದರು.

ಪ್ರಕರಣ ಸಂಬಂಧ ಸಿಬಿಎಸ್ಇ, ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು, ಮರು ಪರೀಕ್ಷೆ ಮಾಡುವುದೇ ಬೇಡವೇ ಎಂಬುದು ಇದೀಗ ದೊಡ್ಡ ಸಮಸ್ಯೆಯಾಗಿದೆ. ಪರೀಕ್ಷೆಯ ಪೂರ್ವ ಸಿದ್ಧತೆಗಳನ್ನು ಅಕ್ಟೋಬರ್ ನಿಂದಲೇ ಮಾಡಿಕೊಳ್ಳಲಾಗಿತ್ತು. ಮೇ. 3 ರಂದು ಪರೀಕ್ಷೆ ನಡೆಸಲಾಯಿತು. ನ್ಯಾಯಾಲಯ ಮರು ಪರೀಕ್ಷೆ ಮಾಡಬೇಕೆಂದು ಆದೇಶ ನೀಡಿದರೆ. ಮತ್ತೊಮ್ಮೆ ಸಿದ್ಧತೆ ನಡೆಸಬೇಕಾಗುತ್ತದೆ ಎಂದು ಹೇಳಿದ್ದರು. ಇದರಂತೆ ಮರುಪರೀಕ್ಷೆ ನಡೆಸುವ ಸಿಬಿಎಸ್ಇ ಯೋಜನೆ ವಿರುದ್ಧ ದೇಶಾದ್ಯಂತ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಮಾಧ್ಯಮಿಕ ಶಿಕ್ಷಣ ಕೇಂದ್ರೀಯ ಮಂಡಲಿಯು (ಸಿಬಿಎಸ್ಇ) ಜೂನ್ 5 ರಂದು ಅಖಿಲ ಭಾರತ ಪೂರ್ವ ವೈದ್ಯಕೀಯ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಬೇಕಿತ್ತು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯಾದ್ದರಿಂದ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ಮಾಧ್ಯಮಿಕ ಶಿಕ್ಷಣದ ಕೇಂದ್ರೀಯ ಮಂಡಳಿಗೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.