ಅತ್ಯಾಚಾರ ಪ್ರಕರಣ ದಾಖಲಿಸದ ಪೊಲೀಸನ್ನು ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯರು
ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಳ್ಳದ ಪೊಲೀಸರನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ...

ಭುವನೇಶ್ವರ: ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಳ್ಳದ ಪೊಲೀಸರನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಭುವನೇಶ್ವರ ಸ್ಲಂವೊಂದರಲ್ಲಿ ಸಂತೋಷ್ ಜೈನ್ ಎಂಬಾತ ಹುಡುಗಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸಂತೋಷ್ ನನ್ನು ಹಿಡಿದ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಹುಡುಗಿಯ ಪೋಷಕರೊಂದಿಗೆ ಲಕ್ಷ್ಮಿ ಸಾಗರ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಾದ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ.
ಅಲ್ಲದೆ ಅತ್ಯಾಚಾರಿ ಆರೋಪಿಯನ್ನು ರಕ್ಷಿಸುವ ಸಲುವಾಗಿ ಆರು ಮಂದಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸಂತೋಷ್ ಜೈನ್ ನನ್ನು ರಕ್ಷಿಸಲು ಮುಂದಾಗಿದ್ದರು. ಇದರಿಂದ ಕೆರಳಿದ ಸ್ಥಳೀಯರು ಪೊಲೀಸರಿಗೆ ಹಿಗ್ಗಾ ಮುಗ್ಗ ಥಳಿಸಿದ್ದಾರೆ. ಅಲ್ಲಿಂದ ಕಾಲು ಕಿತ್ತ ಪೊಲೀಸರು ಠಾಣೆಗೆ ಬಂದು ಮತ್ತೆ 20 ಪೊಲೀಸರೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಇದರಿಂದ ಧೃತಿಗೆಡದ ಸ್ಥಳೀಯರು ಮತ್ತೆ 20 ಮಂದಿ ಪೊಲೀಸರ ಮೇಲೂ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ನಂತರ ಪರಿಸ್ಥಿತಿ ಸುಧಾರಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ. ಈ ಘಟನೆಯಲ್ಲಿ ಓರ್ವ ಎಸ್ಐ ಹಾಗೂ ಮಹಿಳಾ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


