ದೆಹಲಿ ಪೌರ ಕಾರ್ಮಿಕರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ
ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ದೆಹಲಿ ಪೌರ ಕಾರ್ಮಿಕರ ಧರಣಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್...

ನವದೆಹಲಿ: ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ದೆಹಲಿ ಪೌರ ಕಾರ್ಮಿಕರ ಧರಣಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನೌಕರರನ್ನು ಸಮಸ್ಯೆಯನ್ನು ಆಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇದು ನಮಗೆ ಸಂಬಂಧಿಸಿಲ್ಲ ಎಂದು ಹೇಳುತ್ತಿದೆ. ಇನ್ನು ಆಪ್ ಸರ್ಕಾರ ಕೂಡ ವ್ಯತಿರಿಕ್ತ ಧೋರಣೆಯನ್ನು ಅನುಸರಿಸುತ್ತಿದೆ. ಹೀಗಾದರೆ ಕಾರ್ಮಿಕರು ಯಾರನ್ನು ನಂಬಬೇಕು ಎಂದು ಪ್ರಶ್ನಿಸಿದರು.
ಕಳೆದ 10 ದಿನಗಳಿಂದ ರಸ್ತೆಬದಿಯಲ್ಲೇ 15 ಸಾವಿರ ಟನ್‌ಗೂ ಅಧಿಕ ತೂಕದ ತ್ಯಾಜ್ಯವನ್ನು ಎಸೆದು ಪ್ರತಿಭಟನೆ ನಡೆಸುತ್ತಿರುವ 12 ಸಾವಿರಕ್ಕೂ ಅಧಿಕ ಪೌರಕಾರ್ಮಿಕರು ಸಂಬಳ ಸಿಗುವವರೆಗೆ ಪ್ರತಿಭಟಿಸಲು ನಿರ್ಧರಿಸಿ ಬೀದಿಗಿಳಿದಿದ್ಧಾರೆ. ಇದರಿಂದ ನಗರದಲ್ಲಿ ಆರೋಗ್ಯ ಸಮಸ್ಯೆ ಆರಂಭವಾಗಿದೆ.
ಇನ್ನು ರಾಹುಲ್ ಗಾಂಧಿ ಅವರು ಮೂವರು ಮೇಯರ್‌ಗಳೊಂದಿಗೆ ಮಾತುಕತೆ ನಡೆಸಿದ್ದು, ಆಪ್ ಸರ್ಕಾರ ಸಂಬಳ ಪಾವತಿಗೆ ಸಮ್ಮತಿಸಿದ್ದು ಶೀಘ್ರವೇ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


