ನೊಯ್ಡಾ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಗಡ: ಭಾರಿ ನಷ್ಟ ಶಂಕೆ
ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ...

ನೊಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಶನಿವಾರ ತಿಳಿದುಬಂದಿದೆ.
ನೊಯ್ಡಾದ ಸೆಕ್ಟರ್ 46 ಪ್ರದೇಶದಲ್ಲಿನ ಗಾರ್ಮೆಂಟ್ಸ್ ಫ್ಯಾಕ್ಟರಿಯೊಂದರಲ್ಲಿ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಹೊಗೆಯಂತೆ ಕಂಡ ಬೆಂಕಿ ಸಮಯವಾಗುತ್ತಿದ್ದಂತೆ ಇಡೀ ಕಾರ್ಖಾನಗೆ ಹಬ್ಬಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ 12 ಅಗ್ನಿಶಾಮಕ ವಾಹನಗಳು ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಕಿದ್ದಾರೆ.
ಕಾರ್ಖಾನೆ ಸುತ್ತಲೂ ದಟ್ಟವಾದ ಬೆಂಕಿ ಆವರಿಸಿರುವುದರಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ತೊಡಕು ಉಂಟಾಗುತ್ತಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಕರಲಾಗಿದ್ದು, ಭಾರಿ ನಷ್ಟ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವಂತೆ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


