ಭಾರತ ವಿರೋಧಿ ವಿಚಾರ ಸಂಕಿರಣ: ಗಿಲಾನಿಗೆ ಗೃಹ ಬಂಧನ
ಭಾರತದ ವಿರೋಧಿ ವಿಚಾರ ಸಂಕಿರಣ ಸಿದ್ಧತೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರವು ಕಾಶ್ಮೀರದ ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗಿಲಾನಿಗೆ ಶನಿವಾರ ಗೃಹ ಬಂಧನ ವಿಧಿಸಿದೆ...

ಶ್ರೀನಗರ: ಭಾರತದ ವಿರೋಧಿ ವಿಚಾರ ಸಂಕಿರಣ ಸಿದ್ಧತೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಂಡಿರುವ ಭಾರತ ಸರ್ಕಾರವು ಕಾಶ್ಮೀರದ ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗಿಲಾನಿಗೆ ಶನಿವಾರ ಗೃಹ ಬಂಧನ ವಿಧಿಸಿದೆ.
ಮೂಲಗಳ ಪ್ರಕಾರ ಜೂನ್. 14 ರಂದು ಶ್ರೀನಗರದಲ್ಲಿ ಭಾರತ ವಿರೋಧಿ ವಿಚಾರ ಸಂಕಿರಣ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಅಲ್ಪ ಸಂಖ್ಯಾತ ಸಮುದಾಯದ ಮುಖಂಡರು, ಸಿಖ್ ಸಮುದಾಯದ ಅಕಾಲಿ ದಳ ಮುಖಂಡ ಸಿಮ್ರಂಜಿತ್ ಮನ್ ಹಾಗೂ ಕ್ರೈಸ್ತ ಸಮುದಾಯದ ಮುಂಖಡರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ. ವಿಚಾರ ಸಂಕಿರಣದಲ್ಲಿ ಧರ್ಮಾಂಧ ಹಿಂದುತ್ವದ ಅಜೆಂಡಾ ಮೂಲಕ ಕಾಶ್ಮೀರವನ್ನು ಕೇಸರೀಕರಣಗೊಳಿಸಲು ಪ್ರಯತ್ನಿಸುತ್ತಿರುವ ಕೋಮುವಾದಿ ಶಕ್ತಿಗಳ ವಿರುದ್ಧ ಪ್ರತಿಭಟಿಸಲು ಹುರಿಯತ್ ಕಾನ್ಫರೆನ್ಸ್ ಯೋಜನೆ ರೂಪಿಸಿದೆ ಎಂದು ಹೇಳಲಾಗುತ್ತಿತ್ತು.
ಗಿಲಾನಿ ಭಾರತ ವಿರೋಧಿ ವಿಚಾರ ಸಂಕಿರಣದಿಂದ ಕೋಮುಗಲಭೆ ಉಂಟಾಗುವ ಸಾಧ್ಯತೆಗಳಿವೆ ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಸರ್ಕಾರವು ಮುಂಜಾಗ್ರತೆ ಕ್ರಮವಾಗಿ ಹುರಿಯತ್ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರನ್ನು ಗೃಹ ಬಂಧನದಲ್ಲಿರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


