ದೇಶ

ಯೋಗ ದಿನದ ಹೆಸರಲ್ಲಿ ಬಿಜೆಪಿ ಕೋಮುವಾದ: ಮಾಯಾವತಿ ಆರೋಪ

ಯೋಗ ಹೆಸರಲ್ಲಿ ಭಾರತೀಯ ಜನತಾ ಪಕ್ಷ ದೇಶದಲ್ಲಿ ಕೋಮುವಾದವನ್ನು ಪಸರಿಸುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಯೋಗ ದಿನದ ಹೆಸರಲ್ಲಿ ಬಿಜೆಪಿ ಕೋಮುವಾದ: ಮಾಯಾವತಿ ಆರೋಪ
ಬಿಎಸ್ಪಿ ಅಧ್ಯಕ್ಷೆ ಮಾಯಾವತಿ
Published On :

ಲಖನೌ: ಯೋಗ ಹೆಸರಲ್ಲಿ ಭಾರತೀಯ ಜನತಾ ಪಕ್ಷ ದೇಶದಲ್ಲಿ ಕೋಮುವಾದವನ್ನು ಪಸರಿಸುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಯೋಗದಿನ ಆಚರಣೆ ಹಿನ್ನಲೆಯಲ್ಲಿ ಇಂದು ಲಖನೌನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯೋಗ ದಿನ ಆಚರಿಸುತ್ತಿರುವುದು ಶ್ಲಾಘನೀಯವೇ ಆದರೂ ಯೋಗದ ನೆಪದಲ್ಲಿ ದೇಶದಲ್ಲಿ ಕೋಮುವಾದ ಬಿತ್ತರಿಸಲು ಬಿಜೆಪಿ ಹೊರಟಿದೆ. ಇದು ಸರಿಯಲ್ಲ ಎಂದು ಆರೋಪಿಸಿದ್ದಾರೆ.

"ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಬಾಗಿಲಿನಿಂದ ಕೋಮುವಾದವನ್ನು ದೇಶದಲ್ಲಿ ಹರಡುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಯೋಗ ದಿನಕ್ಕೆ ತಮ್ಮ ಪಕ್ಷ ಯಾವುದೇ ಕಾರಣಕ್ಕೂ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಕೋಮುವಾದ ಬಿಂಬಿಸುವ ಬಿಜೆಪಿ ಪ್ರಯತ್ನವನ್ನು ಖಂಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೊಸ ಯೋಜನೆಗಳನ್ನು ಆರಂಭಿಸುತ್ತಿದ್ದಾರೆ. ಆದರೆ ಅವರು ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ. ಇದು ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಕೇಂದ್ರ ಸರ್ಕಾರದ ಈ ವಿವಾದಾತ್ಮಕ ಸಂಸ್ಕೃತಿಗಳು  ಕೇಂದ್ರ ಸರ್ಕಾರದ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿಕೃತ ಮನೋಭಾವವನ್ನು ಪ್ರದರ್ಶಿಸುತ್ತದೆ ಎಂದು ಮಾಯಾವತಿ ಕಿಡಿಕಾರಿದ್ದಾರೆ.

ಇದೇ ಜೂನ್ 21ರಂದು ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ಸರ್ಕಾರ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡುವ ಮೂಲಕ ಇಡೀ ದೇಶದ ಜನತೆಗೆ ಯೋಗದ ಮಹತ್ವ ಸಾಲು ಹೋರಟಿದ್ದಾರೆ. ಆದರೆ ಈ ವಿಚಾರವೇ ಇದೀಗ ಪ್ರತಿಪಕ್ಷಗಳಲ್ಲಿ ವಿವಾದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.