ಗಣರಾಜ್ಯೋತ್ಸವ ದಿನಾಚರಣೆ ಮಾದರಿಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದ ಪ್ರಸಾರ
ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮಾದರಿಯಲ್ಲಿ ಪ್ರಸಾರ ಮಾಡಲು ಸಾರ್ವಜನಿಕ ಪ್ರಸಾರಕ ದೂರದರ್ಶನ ನಿರ್ಧರಿಸಿದೆ.

ನವದೆಹಲಿ: ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮಾದರಿಯಲ್ಲಿ ಪ್ರಸಾರ ಮಾಡಲು ಸಾರ್ವಜನಿಕ ಪ್ರಸಾರಕ ದೂರದರ್ಶನ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿಯೂ ಭಾಗವಹಿಸಲಿರುವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದರ ಭಾಗವಾಗಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಮಾದರಿಯಲ್ಲಿ ಪ್ರಸಾರ ಮಾಡಲು ಸಿದ್ಧತೆ ನಡೆಸಲಾಗಿದೆ. ಇದಕ್ಕಾಗಿ 20 ಹೈ ಡೆಫನಿಷನ್ ಕ್ಯಾಮರಾಗಳನ್ನು ಬಳಕೆ ಮಾಡಲಾಗುತ್ತದೆ. ಹೈಡೆಫನಿಷನ್ ಕ್ಯಾಮರಾಗಳನ್ನು ಇಂಡಿಯಾ ಗೇಟ್ ಮೇಲೆ ನಿಯೋಜಿಸಲಾಗುತ್ತದೆ. ಜಿಬ್ಸ್ ಮೂಲಕ ಮತ್ತಷ್ಟು ಕ್ಯಾಮರಾಗಳು ರಾಜಪಥದಲ್ಲಿ ನಡೆಯಲಿರುವ ಯೋಗ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಲಿವೆ. ಹೈಡ್ರಾಲಿಕ್ ಕ್ರೇನ್ ಮೂಲಕ ಮತ್ತೊಂದು ಕ್ಯಾಮರ ರಾಜಪಥದಿಂದ ವಿಜಯ್ ಚೌಕ ವರೆಗೂ ನಡೆಯಲಿರುವ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದೆ.
ಪ್ರಥಮ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿದ್ದು, ಗಣರಾಜ್ಯೋತ್ಸವ ಕಾರ್ಯಕ್ರಮದ ಮಾದರಿಯಲ್ಲೇ ಮುಖ್ಯವೇದಿಕೆಯ ಕಾರ್ಯಕ್ರಮವನ್ನು ಸುಮಾರು 8 ಕ್ಯಾಮರಾಗಳು ರೆಕಾರ್ಡ್ ಮಾಡಲಿವೆ.
ಕಾರ್ಯಕ್ರಮದ ನೇರಪ್ರಸಾರಕ್ಕಾಗಿ ಹಲವು ಇಂಜಿನಿಯರ್ ಗಳು, ಛಾಯಾಗ್ರಾಹಕರು ದೃಶ್ಯ ತಜ್ಞರು ಕಾರ್ಯನಿರ್ವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಸಾರಕ್ಕಾಗಿ ಆಯುಷ್ ಇಲಾಖೆ ಎಲ್.ಇ.ಡಿ ಸ್ಕ್ರೀನ್ ಗಳ ಸೌಲಭ್ಯ ಒದಗಿಸಲಿದೆ. ದೃಶ್ಯ ಮಾಧ್ಯಮದೊಂದಿಗೆ ಆಲ್ ಇಂಡಿಯಾ ರೇಡಿಯೋ ಸಹ ಯೋಗ ದಿನಾಚರಣೆಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


