ಪತ್ರಕರ್ತನ ಕೊಲೆ: ಸಿಬಿಐ ತನಿಖೆಗೆ ಯೋಗಿ ಆದಿತ್ಯಾನಾಥ್ ಆಗ್ರಹ
ಪತ್ರಕರ್ತ ಜಗೇಂದರ್ ಸಿಂಗ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಬಿಜೆಪಿ ಸಂದಸ ಯೋಗಿ ಆದಿತ್ಯನಾಥ್ ಸೋಮವಾರ ಆಗ್ರಹಿಸಿದ್ದಾರೆ...

ಬಲ್ಲಿಯಾ: ಪತ್ರಕರ್ತ ಜಗೇಂದರ್ ಸಿಂಗ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಬಿಜೆಪಿ ಸಂದಸ ಯೋಗಿ ಆದಿತ್ಯನಾಥ್ ಸೋಮವಾರ ಆಗ್ರಹಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರಕರಣದಲ್ಲಿ ಸರ್ಕಾರದ ಅಧಿಕಾರಿಗಳೇ ತೊಡಗಿಕೊಂಡಿರುವುದರಿಂದ ರಾಜ್ಯ ಸರ್ಕಾರ ತನಿಕೆ ನಡೆಸಿದರೆ, ಮೃತರ ಕುಟುಂಬಕ್ಕೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆ ಒಪ್ಪಿಸುಲವಂತೆ ಆಗ್ರಹಿಸಿದ್ದಾರೆ.
ಇದೇ ವೇಳೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷದ ವಿರುದ್ಧ ಕಿಡಿಕಾಡಿರುವ ಅವರು, 2017 ವಿಧಾನಸಭಾ ಚುನಾವಣೆಯಲ್ಲಿ ಈ ಎರಡು ಪಕ್ಷಗಳು ಉತ್ತರಪ್ರದೇಶದಲ್ಲಿ ನೆಲಕಚ್ಚಲಿದ್ದು, ಬಿಜೆಪಿ ಪಕ್ಷ ಉತ್ತರಪ್ರದೇಶದಲ್ಲಿ ತಲೆ ಎತ್ತಲಿದೆ ಎಂದು ಹೇಳಿದ್ದಾರೆ.
ಎನ್ ಡಿಎ ಸರ್ಕಾರ ಸಾಧನೆ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮ್ಯಾನ್ಮಾರ್ ವಿರುದ್ಧ ಭಾರತ ತೆಗೆದುಕೊಂಡ ಕಠಿಣ ನಿಲುವು ಪಾಕಿಸ್ತಾನದ ಮೇಲೂ ಆಗುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ಪಾಕಿಸ್ತಾನವು ತಕ್ಷಣವೇ ಭಯೋತ್ಪಾದನೆಯನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಸಚಿವರಾದ ರಾಮಮೂರ್ತಿ ವರ್ಮಾ ಅವರ ಅಕ್ರಮಗಳ ವಿರುದ್ಧ ಪತ್ರಕರ್ತ ಜಗೇಂದರ್ ಸಿಂಗ್ ಎಂಬಾತ ಫೇಸ್ ಬುಕ್ ನಲ್ಲಿ ಬರೆದ ಎಂಬ ಒಂದೇ ಕಾರಣಕ್ಕಾಗಿ ಕಳೆದ ಜೂನ್ 1ರಂದು ರಾಮಮೂರ್ತಿ ಬೆಂಬಲಿಗರು ಸಾರ್ವಜನಿಕವಾಗಿ ಜಗೇಂದರ್ ಸಿಂಗ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಮಾನುಷವಾಗಿ ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


