ಪೆಟ್ರೋಲ್ ದರ 64 ಪೈಸೆ ಏರಿಕೆ, ಡೀಸೆಲ್ ದರ 1.35 ರೂ ಇಳಿಕೆ
ಪೆಟ್ರೋಲ್ ದರ ಏರಿಕೆಯಾಗಿದ್ದು, ಡೀಸೆಲ್ ದರ ಇಳಿಕೆಯಾಗಿದೆ.

ನವದೆಹಲಿ: ಪೆಟ್ರೋಲ್ ದರ ಏರಿಕೆಯಾಗಿದ್ದು, ಡೀಸೆಲ್ ದರ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 65 ಪೈಸೆ ತುಟ್ಟಿಯಾಗಿದ್ದು ಡೀಸೆಲ್ ದರ 1.35 ರೂಪಾಯಿ ಅಗ್ಗವಾಗಿದೆ. ಪರಿಷ್ಕೃತ ದರ ಮಧ್ಯರಾತ್ರಿಯಿಂದ ಜಾರಿಯಾಗಲಿದೆ.
ಈ ಹಿಂದೆ ಮೇ.15 ರಂದು ಇಂಧನ ಬೆಲೆ ಪರಿಷ್ಕರಣೆಯಾಗಿ ಪೆಟ್ರೋಲ್ ದರ 3.13 ರೂಪಾಯಿ, ಡೀಸೆಲ್ ದರ 2 .17 ರೂಪಾಯಿ ಏರಿಕೆಯಾಗಿತ್ತು. ನಿರಂತರ ಎರಡು ಬಾರಿ ಇಂಧನ ಬೆಲೆ ಏರಿಕೆಯಾದ ಬಳಿಕ ಮತ್ತೊಮ್ಮೆ ಇಂಧನ ದರ ಪರಿಷ್ಕರಣೆಯಾಗಿದ್ದು ಡೀಸೆಲ್ ದರ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದ್ದರ ಪರಿಣಾಮ ಕಳೆದ ಆಗಸ್ಟ್ ನಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಇಳಿಕೆಯಾಗಿತ್ತು. ಆದರೆ ಇತ್ತೀಚೆಗೆ ಬೆಲೆ ಏರಿಕೆಯಾಗಿಗುತ್ತಿದೆ.
ಪೆಟ್ರೋಲ್ ಡೀಸೆಲ್ ದರಗಳನ್ನು ಮಾರುಕಟ್ಟೆ ದರದೊಂದಿಗೆ ಸಂಯೋಜಿಸಲಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಳಿತವಾದಾಗ ಇಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಲಿದೆ. ಕಳೆದ ಅಕ್ಟೋಬರ್ ನಲ್ಲಿ ಕೇಂದ್ರ ಸರ್ಕಾರ ಡೀಸೆಲ್ ಬೆಲೆಯನ್ನು ನಿಯಂತ್ರಣಮುಕ್ತಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


