ಲಲಿತ್ ಮೋದಿಗೆ ವೀಸಾ ನೆರವು: ಸುಷ್ಮಾ ಸ್ವರಾಜ್ ಗೆ ಶಿವಸೇನೆ ಬೆಂಬಲ
ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಸುಷ್ಮಾ ಸ್ವರಾಜ್ ವಿರುದ್ಧ ಆರೋಪ ಮಾಡಲಾಗುತ್ತಿದೆ ಶಿವಸೇನೆ

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರು ವೀಸಾ ಪಡೆಯಲು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಹಾಯ ಮಾಡಿರುವ ಪ್ರಕರಣದಲ್ಲಿ ಶಿವಸೇನೆ ಸುಷ್ಮಾ ಸ್ವರಾಜ್ ಬೆಂಬಲಕ್ಕೆ ನಿಂತಿದೆ.
ಪ್ರಕರಣದ ಬಗ್ಗೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವುತ್ ಪ್ರತಿಕ್ರಿಯಿಸಿದ್ದು ನರೇಂದ್ರ ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಸುಷ್ಮಾ ಸ್ವರಾಜ್ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ವಿಷಯವೇ ಅಲ್ಲದ್ದನ್ನು ವಿರೋಧ ಪಕ್ಷಗಳು ದೊಡ್ಡ ವಿಷಯವನ್ನಾಗಿಸುತ್ತಿದೆ ಎಂದು ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿರುವ ವಿದೇಶಾಂಗ ಇಲಾಖೆ ಮೋದಿ ಸರ್ಕಾರದ ಪ್ರಬಲ ಆಧಾರಸ್ತಂಭವಾಗಿದೆ. ಇದನ್ನು ಸಹಿಸದ ವಿರೋಧ ಪಕ್ಷಗಳು ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಸುಷ್ಮಾ ಸ್ವರಾಜ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಿಜೆಪಿಯಲ್ಲಿರುವ ಆಂತರಿಕ ರಾಜಕೀಯದಿಂದ ಸುಷ್ಮಾ ಸ್ವರಾಜ್ ವಿರುಧ ಆರೋಪ ಕೇಳಿಬಂದಿದೆ ಎಂಬ ವಿಚಾರದ ಬಗ್ಗೆ ಸಂಜಯ್ ರಾವುತ್ ಪ್ರತಿಕ್ರಿಯಿಸಿದ್ದು, ಬಿಜೆಪಿಯ ಆಂತರಿಕ ರಾಜಕೀಯದ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ ಸುಷ್ಮಾ ಸ್ವರಾಜ್ ಗೆ ಶಿವಸೇನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಿವಸೇನೆ ಎನ್.ಡಿ.ಎ ಸರ್ಕಾರದ ಅತಿ ದೊಡ್ಡ ಮೈತ್ರಿ ಪಕ್ಷವಾಗಿದ್ದು, ಸುಷ್ಮಾ ಸ್ವರಾಜ್ ಶಿವಸೇನೆಯೊಂದಿಗೆ ಉತ್ತಮ ಸ್ನೇಹ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿಯಾಗುವುದಕ್ಕೂ ಮುನ್ನ ಶಿವಸೇನೆ ಸುಷ್ಮಾ ಸ್ವರಾಜ್ ಪ್ರಧಾನಿಯಾಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


