ಮದರ್ ಡೈರಿ ಹಾಲಿನಲ್ಲಿ ಡಿಟರ್ಜೆಂಟ್ ಪತ್ತೆ!
ಮದರ್ ಡೈರಿಯಲ್ಲಿ ಕೆಳದರ್ಜೆಯ ಹಾಲಿನ ಮಾದರಿಗಳು ಪತ್ತೆಯಾಗಿದ್ದು, ಈ ಪೈಕಿ ಒಂದರಲ್ಲಿ ಡಿಟರ್ಜೆಂಟ್ ಇದ್ದದ್ದು ಕಂಡುಬಂದಿದೆ

Published On :
ಆಗ್ರಾ: ಮದರ್ ಡೈರಿಯಲ್ಲಿ ಕೆಳದರ್ಜೆಯ ಹಾಲಿನ ಮಾದರಿಗಳು ಪತ್ತೆಯಾಗಿದ್ದು, ಈ ಪೈಕಿ ಒಂದರಲ್ಲಿ ಡಿಟರ್ಜೆಂಟ್ ಇದ್ದದ್ದು ಕಂಡುಬಂದಿದೆ ಎಂದು ಆಹಾರ ತಪಾಸಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ ಈ ಆರೋಪವನ್ನು ಮದರ್ ಡೈರಿ ಅಧಿಕಾರಿಯೊಬ್ಬರು ತಳ್ಳಿಹಾಕಿದ್ದು ಕಂಪನಿ ಕಟ್ಟುನಿಟ್ಟಿನ ಗುಣಮಟ್ಟದ ಪರೀಕ್ಷೆ ನಡೆಸುತ್ತದೆ, ಕೆಳ ದರ್ಜೆಯ ಹಾಲಿನ ಮಾದರಿಗಳು ಕಂಡುಬಂದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಮದರ್ ಡೈರಿಯಿಂದ ಎರಡು ಸ್ಯಾಂಪಲ್ ಗಳನ್ನು ಪಡೆಯಲಾಗಿತ್ತು, ಮಾದರಿಗಳನ್ನು ಲಖನೌ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು ಈ ವೇಳೆ ಮದರ್ ಡೈರಿಯಿಂದ ಪಡೆಯಲಾಗಿದ್ದ ಹಾಲು ಕೆಳದರ್ಜೆಯದ್ದಾಗಿದೆ ಎಂಬುದು ತಿಳಿದುಬಂದಿದೆ ಎಂದು ಆಗ್ರಾದ ಆಹಾರ ಮತ್ತು ಔಷಧ ಆಡಳಿತದ ಮುಖ್ಯಸ್ಥ ರಾಮ್ ನರೇಶ್ ಯಾದವ್ ಹೇಳಿದ್ದಾರೆ. ಅಲ್ಲದೇ ಕೋಲ್ಕತ್ತಾ ಪ್ರಯೋಗಾಲಯದಲ್ಲಿ ನಡೆದ ತಪಾಸಣೆಯಲ್ಲಿ ಹಾಲಿನಲ್ಲಿ ಡಿಟರ್ಜೆಂಟ್ ಇದ್ದಿದ್ದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಆದರೆ ಕಂಪನಿ ವಿರುದ್ಧ ಕೇಳಿಬಂದಿರುವ ಆರೋಪವನ್ನು ತಳ್ಳಿಹಾಕಿರುವ ಮದರ್ ಡೈರಿ ಅಧಿಕಾರಿಗಳು, ಹಾಲನ್ನು ನಾಲ್ಕು ಹಂತದಲ್ಲಿ ಗುಣಮಟ್ಟದ ಪರೀಕ್ಷೆಗೊಳಪಡಿಸಲಾಗುತ್ತದೆ. ಆದ್ದರಿಂದ ಕೆಳದರ್ಜೆಯ ಹಾಲು ಕಂಡುಬರಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಕಲಬೆರಕೆ ಕಂಡುಬಂದಲ್ಲಿ ತಕ್ಷಣವೇ ಅದನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.