ಮೋದಿ ಹೆಸರಲ್ಲಿ ಬಿಹಾರ ಎಲೆಕ್ಷನ್
ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲೇ ಬಿಜೆಪಿ ಎದುರಿಸಲಿದೆ. ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಪಕ್ಷದ ಚುನಾವಣಾ ಉಸ್ತುವಾರಿ, ರಸಗೊಬ್ಬರ ಸಚಿವ ಅನಂತ್‍ಕುಮಾರ್ ಹೇಳಿದ್ದಾರೆ...

ನವದೆಹಲಿ: ಬಿಹಾರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲೇ ಬಿಜೆಪಿ ಎದುರಿಸಲಿದೆ. ಈಗಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಪಕ್ಷದ ಚುನಾವಣಾ ಉಸ್ತುವಾರಿ, ರಸಗೊಬ್ಬರ ಸಚಿವ ಅನಂತ್‍ಕುಮಾರ್ ಹೇಳಿದ್ದಾರೆ.
ಬಿಹಾರ ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಹಲವಾರು ನಾಯಕರು ಉನ್ನತ ಹುದ್ದೆಯಲ್ಲಿದ್ದು, ಎಲ್ಲರೂ ಸಮರ್ಥರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿಯೇ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ನರೇಂದ್ರ ಮೋದಿ ಅವರು ಬಿಜೆಪಿಯ ಮುಖ. ಹೀಗಾಗಿ ಅವರ ನಾಯಕತ್ವದಲ್ಲಿಯೇ ಮುಂದಡಿ ಇಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ಜೆಡಿಯು, ಆರ್‍ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟದಿಂದ ಮಾಜಿ ಸಿಎಂ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸಲಾಗಿದೆ. ಷರೀಫ್ ಜತೆ ಮೋದಿ ಮಾತುಕತೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಗೆ ಕರೆ ಮಾಡಿ ರಂಜಾನ್ ಹಬ್ಬದ ಶುಭ ಕೋರಿದ್ದಾರೆ. ಈ ಮೂಲಕ ಕೆಲವು ದಿನಗಳಿಂದ ಎರಡೂ ದೇಶಗಳ ಮಧ್ಯೆ ನಡೆಯುತ್ತಿದ್ದ ಮಾತಿನ ಸಮರಕ್ಕೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ಅಲ್ಲದೆ, ಎರಡೂ ದೇಶಗಳ ಮಧ್ಯೆ ಶಾಂತಿಯುತ ಮತ್ತು ಸ್ನೇಹ ಸಂಬಂಧ ಏರ್ಪಡಬೇಕೂ ಎಂದೂ ಹೇಳಿದ್ದಾರೆ. ಸುಮಾರು ಐದು ನಿಮಿಷ ಕಾಲ ಮಾತನಾಡಿರುವ ಮೋದಿ, ರಂಜಾನ್ ದಿನದಂದು ಭಾರತದ ಬಂಧನದಲ್ಲಿರುವ ಮೀನುಗಾರರ ಬಿಡುಗಡೆ ಮಾಡುವುದಾಗಿಯೂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


