ನನ್ನ ಮಗಳು ನ್ಯಾಯವಾದಿ
ನನ್ನ ಮಗಳು ನ್ಯಾಯವಾದಿ ಮತ್ತು ಆಕೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಪದವೀಧರೆ. ಟ್ವಿಟ್ಟರ್ ನಲ್ಲಿ ಬಂದಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ...

ನವದೆಹಲಿ:ಈಶಾನ್ಯ ರಾಜ್ಯ ಕೋಟಾ ಮೂಲಕ ಮಗಳಿಗೆ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯಲು ಶಿಫಾರಸು ತೆಗೆದುಕೊಂಡಿದ್ದರು ಎಂದು ತಮ್ಮ ಬಗ್ಗೆ ಟ್ವಿಟ್ಟರ್ ನಲ್ಲಿ ಬಂದಿರುವ ಹೇಳಿಕೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಮಗಳು ನ್ಯಾಯವಾದಿ ಮತ್ತು ಆಕೆ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಪದವೀಧರೆ. ಟ್ವಿಟ್ಟರ್ ನಲ್ಲಿ ಬಂದಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಶಿಫಾರಸ್ಸು ಪಡೆಯಲು ಮತ್ತು ನೀಡಲು ಅಷ್ಟೊಂದು ಪ್ರಭಾವಿಯಲ್ಲ, ಅವರ ಮಗಳಿಗೆ ವೈದ್ಯಕೀಯ ಓದಲು ಈಶಾನ್ಯ ಕೋಟಾದಡಿ ಸೀಟು ಪಡೆದಿದ್ದರು ಎಂದು ಟ್ವಿಟ್ಟರ್ ನಲ್ಲಿ ಬಂದಿತ್ತು.
ಸುಷ್ಮಾ ಸ್ವರಾಜ್ ಅವರ ಪ್ರತಿಕ್ರಿಯೆ ಬಂದ ಕೂಡಲೇ ಟ್ವಿಟ್ಟರ್ ಮಾಡಿದವರು ಅದನ್ನು ತೆಗೆದುಹಾಕಿದ್ದರು. ಆದರೆ ಆ ಟ್ವೀಟನ್ನು ಬೇರೆಯವರು ಮರು ಟ್ವೀಟ್ ಮಾಡಿದ್ದರು.
ಸುಷ್ಮಾ ಅವರಿಗೆ ಟ್ವಿಟ್ಟರ್ ಬೆಂಬಲಿಗರು, 'ನಾಯಿ ಬೊಗಳುತ್ತಿರುತ್ತದೆ', ಅದಕ್ಕೆ ಪ್ರತಿಕ್ರಿಯೆ ನೀಡದೆ, ತಮ್ಮ ಉತ್ತಮ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಹೇಳಿದ್ದಾರೆ.
ಸುಷ್ಮಾ ಸ್ವರಾಜ್ ಅವರ ಪುತ್ರಿ ಬಲ್ಸುರಿ ವಕೀಲೆಯಾಗಿದ್ದು, ಲಲಿತ್ ಮೋದಿಯವರ ಪಾಸ್ ಪೋರ್ಟ್ ರದ್ದು ಕೇಸಿನಲ್ಲಿ ನ್ಯಾಯಾಲಯದ ಮುಂದೆ ಹಾಜರಾದ ವಿಚಾರದಲ್ಲಿ ಅವರ ಹೆಸರು ಕೇಳಿ ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


