ಹಿಮಾಚಲ ಪ್ರದೇಶ ಸಿಎಂ ವಿರುದ್ಧ ಎಫ್‌ಐಆರ್ ದಾಖಲು
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಗುರುವಾರ...

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹಿಮಾಚಲಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಹಾಗೂ ಅವರ ಕುಟಂಬದ ವಿರುದ್ಧ ಸಿಬಿಐ ಗುರುವಾರ ಎಫ್‌ಐಆರ್ ದಾಖಲಿಸಿದೆ.
ವೀರಭದ್ರ ಸಿಂಗ್ ಅವರು ಕೇಂದ್ರ ಸಚಿವರಾಗಿದ್ದ ವೇಳೆ 6.1 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಇಂದು ಸಿಂಗ್ ಹಾಗೂ ಪತ್ನಿ ಪ್ರತಿಭಾ ಸಿಂಗ್, ಪುತ್ರ ವಿಕ್ರಮಾದಿತ್ಯ ಸಿಂದ್, ಪುತ್ರಿ ಅಪರಾಜಿತ ಸಿಂಗ್ ಮತ್ತು ಎಲ್‌ಐಸಿ ಏಜೆಂಟ್ ಆನಂದ್ ಚೌವ್ಹಾಣ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
2009ರಿಂದ 11ರವರೆಗೆ ಯುಪಿಎ ಸರ್ಕಾರದಲ್ಲಿ ಉಕ್ಕು ಸಚಿವರಾಗಿದ್ದ ವೇಳೆ ವೀರಭದ್ರ ಸಿಂಗ್ ಅವರು 6.1 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿರುವ ಕುರಿತು ಸಿಬಿಐ ಪ್ರಾಥಮಿಕ ತನಿಖೆ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


