ದೇಶ

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ತಳ್ಳಿಹಾಕುವಂತಿಲ್ಲ: ಅಡ್ವಾಣಿ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲೇ, ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ...

ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ತಳ್ಳಿಹಾಕುವಂತಿಲ್ಲ: ಅಡ್ವಾಣಿ
ಎಲ್.ಕೆ.ಅಡ್ವಾಣಿ
Published On :

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲೇ, ಮಾಜಿ ಉಪಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ದೇಶದಲ್ಲಿ ಮತ್ತೆ  ತುರ್ತು ಪರಿಸ್ಥಿತಿ ಎದುರಿಸುವಂತಹ ಸ್ಥಿತಿ ಬದ್ರೂ ಬರಬಹುದು. ಅದನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.

ಸದ್ಯ ದೇಶ ವಿರೋಧಿ ಹಾಗೂ ಸಂವಿಧಾನ ವಿರೋಧಿ ಶಕ್ತಿಗಳು  ಬಲಗೊಳ್ಳುತ್ತಿದ್ದು, ಇದರಿಂದ ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತದೆ. ಆದರೆ ದೇಶದಲ್ಲಿ ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆ ತುಂಬಾ ಶಕ್ತಿಶಾಲಿಯಾಗಿದೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಡ್ವಾಣಿ ಹೇಳಿದ್ದಾರೆ.

1975ರಿಂದ 77ರವರೆಗೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹಾಗಂತ ನಾಗರಿಕರ ಮೂಲಭೂತ ಹಕ್ಕುಗಳನ್ನು ಮತ್ತೆ ಕಸಿಯಲ್ಲ ಎಂಬ ನಂಬಿಕೆ ಇಲ್ಲ. ನಿಜಕ್ಕೂ ಇದನ್ನು ತುಂಬಾ ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಆದರೆ ಈ ಪರಿಸ್ಥಿತಿ ಮತ್ತೆ ಪುನರಾವರ್ತನೆಯಾಗಲ್ಲ ಎಂದು ಹೇಳುವುದು ಕಷ್ಟ. ಕೆಲವು ಶಕ್ತಿಗಳು ಪ್ರಜಾಪ್ರಭುತ್ವದ ಶಕ್ತಿ ಕುಂದಿಸುತ್ತಿವೆ. ಹೀಗಾಗಿ ತುರ್ತು ಪರಿಸ್ಥಿತಿಯನ್ನು ತಳ್ಳಿಹಾಕುವಂತಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ನಡುವಿನ ಸಂಬಂಧ ಅಷ್ಟಕಷ್ಟೇ ಎಂಬುದು ಬಹಿರಂಗ ಸತ್ಯ. ಅಲ್ಲದೇ ಮೋದಿ ಕೆಲವು ಮಸೂದೆಗಳನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸುತ್ತಿರುವುದು, ಸಂವಿಧಾನವನ್ನು ಕಡೆಗಣಿಸುತ್ತಿದ್ದಾರೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಅಡ್ವಾಣಿ ಈ ರೀತಿ ಹೇಳಿಕೆ ನೀಡಿದ್ದಾರೆಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. ಇನ್ನು ಈ ಬಗ್ಗೆ ಬಿಜೆಪಿ ಉತ್ತರ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.