ದೇಶ

ಅಡ್ವಾಣಿಯ ತುರ್ತು ಪರಿಸ್ಥಿತಿ ಹೇಳಿಕೆಗೆ ಕೇಜ್ರಿವಾಲ್ ಸಹಮತ : ವ್ಯಂಗ್ಯ ಧಾಟಿಯಲ್ಲಿ ಪ್ರಶ್ನೆ

ತುರ್ತು ಪರಿಸ್ಥಿತಿಯನ್ನು ಹೇರುವ ಮೊದಲ ಪ್ರಯೋಗ ದೆಹಲಿಯಲ್ಲಿ ನಡೆಯುತ್ತಿದೆಯೇ ಎಂದು ಅರವಿಂದ್ ಕೇಜ್ರಿವಾಲ್ ವ್ಯಂಗ್ಯ ಧಾಟಿಯಲ್ಲಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಅಡ್ವಾಣಿಯ ತುರ್ತು ಪರಿಸ್ಥಿತಿ ಹೇಳಿಕೆಗೆ ಕೇಜ್ರಿವಾಲ್ ಸಹಮತ : ವ್ಯಂಗ್ಯ ಧಾಟಿಯಲ್ಲಿ ಪ್ರಶ್ನೆ
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಜಾರಿಯಾಗುವ ಸಾಧ್ಯತೆ ಇದೆ ಎಂಬ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹಮತ ವ್ಯಕ್ತಪಡಿಸಿದ್ದು ಅಡ್ವಾಣಿ ಅವರ ಅಭಿಪ್ರಾಯ ಸರಿಯಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ತುರ್ತು ಪರಿಸ್ಥಿತಿಯನ್ನು ಹೇರುವ ಮೊದಲ ಪ್ರಯೋಗ ದೆಹಲಿಯಲ್ಲಿ ನಡೆಯುತ್ತಿದೆಯೇ ಎಂದು ಅರವಿಂದ್ ಕೇಜ್ರಿವಾಲ್ ವ್ಯಂಗ್ಯ ಧಾಟಿಯಲ್ಲಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ದೆಹಲಿಯಲ್ಲಿ ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆ ಮಾಡುವುದಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗೌರ್ನರ್ ನಡುವಿನ ಭಿನ್ನಾಭಿಪ್ರಾಯವನ್ನು ಮುಂದಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್ ಈ ಟ್ವೀಟ್ ಮಾಡಿದ್ದಾರೆ.

ಲೆಫ್ಟಿನೆಂಟ್ ಗೌರ್ನರ್ ನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ಸರ್ಕಾರ ದೆಹಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಈ ಹಿಂದೆಯೇ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಇದೀಗ ಅಡ್ವಾಣಿ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದು ತುರ್ತುಪರಿಸ್ಥಿತಿ ಹೇರುವ ಮೊದಲ ಪ್ರಯೋಗ ದೆಹಲಿಯಲ್ಲಿ ನಡೆಯಲಿದೆಯೇ ಎಂದು ಪ್ರಶ್ನಿಸಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆಪ್ ಮುಖಂಡ ಅಶುತೋಷ್ ಸಹ ಟ್ವೀಟ್ ಮಾಡಿದ್ದು,  ಬಿಜೆಪಿ ಹಿರಿಯ ನಾಯಕ ಅಡ್ವಾಣಿ, ಮೋದಿ ವಿರುದ್ಧ ರಾಜಕೀಯ ದೋಷಾರೋಪಣೆ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಮೋದಿ ಅವರ ಆಡಳಿತದಲ್ಲಿ ತುರ್ತು ಪರಿಸ್ಥಿತಿ ಬರುವ ದಿನಗಳು ದೂರವಿಲ್ಲ ಎಂದು ಅಶುತೋಷ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.