ಸೋನಿಯಾ ಗಾಂಧಿಯನ್ನು ರಾಕ್ಷಸಿ ಪೂತನಿಗೆ ಹೋಲಿಸಿದ ಬಿಜೆಪಿ ಸಂಸದ
ಬಿಜೆಪಿ ಸಂಸದ ಅಶ್ವಿನಿ ಕುಮಾರ್, ಸೋನಿಯಾ ಗಾಂಧಿ ಅವರನ್ನು ಪೌರಾಣಿಕ ಕಥೆಗಳಲ್ಲಿ ಬರುವ ರಾಕ್ಷಸಿ ಪೂತನಿಗೆ ಹೋಲಿಸಿದ್ದಾರೆ.

ಪಾಟ್ನಾ: ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅಶ್ವಿನಿ ಕುಮಾರ್ ಚೌಬೇ ವಿವಾದ ಸೃಷ್ಟಿಸಿದ್ದಾರೆ.
ಬಿಜೆಪಿ ಸಂಸದ ಅಶ್ವಿನಿ ಕುಮಾರ್, ಸೋನಿಯಾ ಗಾಂಧಿ ಅವರನ್ನು ಪೌರಾಣಿಕ ಕಥೆಗಳಲ್ಲಿ ಬರುವ ರಾಕ್ಷಸಿ ಪೂತನಿಗೆ ಹೋಲಿಸಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗಿಣಿಗೆ ಹೋಲಿಸಿದ್ದಾರೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ವಿರುದ್ಧವೂ ವಾಗ್ದಾಳಿ ನಡೆಸಿರುವ ಅಶ್ವಿನಿ ಕುಮಾರ್ ಚೌಬೇ, ಪೂತನಿಯಿಂದ ತಮಗೆ ವಿಷ ಪ್ರಾಶನವಾಗುತ್ತದೆ ಎಂಬ ಸತ್ಯ ತಿಳಿಯದೇ ಅವರಿಬ್ಬರೂ ಸೋನಿಯಾ ಗಾಂಧಿಯೊಂದಿಗೆ ಕೈ ಜೋಡಿಸಿದ್ದಾರೆ ಎಂದು ಬಿಜೆಪಿ ಸಂಸದ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ವಿರುದ್ಧ ಮಾತನಾಡುತ್ತಿರುವ ರಾಹುಲ್ ಗಾಂಧಿ ಅವರನ್ನು ಗಿಣಿಗೆ ಹೋಲಿಸಿರುವ ಅಶ್ವಿನಿ ಕುಮಾರ್, ಯುಪಿಎ ಆಡಳಿತದ ಅವಧಿಯಲ್ಲಿ ಮೌನವಾಗಿದ್ದ ರಾಹುಲ್ ಗಾಂಧಿ, ಈಗ ಬೇರೆಯವರು ಬಿಜೆಪಿ ವಿರುದ್ಧ ಬರೆದುಕೊಟ್ಟಿದ್ದನ್ನು ಗಿಣಿಯಂತೆ ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಈ ಹಿಂದೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


