ರಾಜೇ, ಸುಷ್ಮಾ ತಲೆದಂಡಕ್ಕೆ ಹೆಚ್ಚಿದ ಒತ್ತಡ
ಲಲಿತ್ ಮೋದಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜಿನಾಮೆಗೆ ಆಗ್ರಹಿಸಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ...

ನವದೆಹಲಿ: ಲಲಿತ್ ಮೋದಿ ಹಗರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸುಷ್ಮಾ ಸ್ವರಾಜ್ ಮತ್ತು ವಸುಂಧರಾ ರಾಜೇ ರಾಜಿನಾಮೆಗೆ ಆಗ್ರಹಿಸಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪ್ರಕರಣ ಕುರಿತು ಮುಂದಿನ ಕಾರ್ಯತಂತ್ರಗಳ ಬಗ್ಗೆ ಅವರಿಬ್ಬರೂ ಚರ್ಚಿಸಿದ್ದಾರೆ. ಅಷ್ಟೇ ಅಲ್ಲ, ಲಲಿತ್ ಮೋದಿ ಅವರ ಪಾಸ್ ಪೋರ್ಟ್ ಅನ್ನು ರದ್ದು ಮಾಡುವಂತೆ ಕೋರಿ ಸುಪ್ರೀಂಗೆ ಅರ್ಜಿ
ಸಲ್ಲಿಸುವ ಕುರಿತೂ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಲಲಿತ್ ಪಾಸ್ ಪೋರ್ಟ್ ಗೆ ಸಂಬಂಧಿಸಿ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪ್ರಶ್ನಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ರಾತ್ರಿ ವೇಳೆ ಪ್ರಧಾನಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಯಾಗಿ ರಾಜಕೀಯ ವಿವಾದದ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ, ಹಗರಣ ಸಂಬಂಧ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಸುಂಧರಾ ರಾಜೇ ರಾಜಿನಾಮೆಗೆ ಒತ್ತಾಯಿಸಿದೆ. ``ಕಾನೂನಿ ನಲ್ಲಿ ಮಾನವೀಯ ನೆಲೆ ಎಂಬ ಪರಿಕಲ್ಪನೆ ಅಸ್ತಿತ್ವದಲ್ಲೇ ಇಲ್ಲ. ರಾಜೇ ಅವರನ್ನು ಬಿಜೆಪಿ ವಜಾ ಮಾಡಬೇಕು. ವಿವಾದದ ಬಗ್ಗೆ ಪ್ರಧಾನಿ ಮಾತನಾಡಬೇಕು. ರಾಜೇ ಪುತ್ರ ದುಶ್ಯಂತ್ ಹಾಗೂ ಲಲಿತ್ ಮೋದಿ ನಡುವೆ ನಡೆದಿದ್ದು ಕಪ್ಪುಹಣದ ವ್ಯವ ಹಾರವೇ ಎಂಬುದು ಸ್ಪಷ್ಟವಾಗಬೇಕು'' ಎಂದು ಕಾಂಗ್ರೆಸ್ ನಾಯಕ ಸಿ.ಪಿ.ಜೋಷಿ ಹೇಳಿದ್ದಾರೆ.
ಏತನ್ಮಧ್ಯೆ, ಹಗರಣದಲ್ಲಿ ಸಿಲುಕಿಕೊಂಡಿರುವ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರನ್ನು ವಜಾ ಮಾಡುವ ಬಗ್ಗೆಯೂ ಬಿಜೆಪಿಯಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ. ಸುಷ್ಮಾ ಕೊರಳಿಗೆ ಮತ್ತಷ್ಟು ಆರೋಪ ಲಲಿತ್ ಮೋದಿ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಲಲಿತ್ ಮೋದಿ ಅವರ ಪ್ರವಾಸ ದಾಖಲೆ ಪತ್ರಗಳಿಗೆ ತುರ್ತಾಗಿ ಅನುಮತಿ ಸಿಗುವಂತೆ ನೋಡಿಕೊಳ್ಳಲು ಬ್ರಿಟನ್‍ನ ಹೈಕಮಿಷನರ್ ಕಚೇರಿಯಿಂದ ಮೂವರು ಜಂಟಿ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿದ ಆರೋಪವೂ ಈಗ ಸುಷ್ಮಾ ಅವರ ಹೆಗಲೇರಿದೆ. ವಿದೇಶಾಂಗ ಸಚಿವಾಲಯವು ಈ ವರ್ಗಾವಣೆಯನ್ನು ಮಾಮೂಲಿ ಪ್ರಕ್ರಿಯೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


