ಲಲಿತ್ ಮೋದಿ ವಿವಾದ: ಪಂಜಾಬ್ ಪ್ರವಾಸ ರದ್ದುಗೊಳಿಸಿದ ರಾಜೇ
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ...

ಜೈಪುರ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರೊಂದಿಗೆ ವ್ಯಾವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಪಂಜಾಬ್ ಪ್ರವಾಸವನ್ನು ದಿಢೀರ್ ರದ್ದು ಮಾಡಿದ್ದಾರೆ.
ರಾಜೇ ಅವರು ಇಂದು ಪಂಜಾಬ್‌ನ ಆನಂದಪುರಕ್ಕೆ ತೆರಳಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಿತ್ತು. ಆದರೆ ತಮ್ಮಿಂದ ಅಮಿತ್ ಶಾ ಅವರಿಗೆ ಮುಜುಗರವಾಗಬಹುದು ಎಂಬ ಕಾರಣದಿಂದ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
'ಬೆನ್ನು ನೋವಿನ ಹಿನ್ನೆಲೆಯಲ್ಲಿ ವೈದ್ಯರು ಮುಖ್ಯಮಂತ್ರಿಗಳಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದು, ಅವರು ಪಂಜಾಬ್ ಪ್ರವಾಸವನ್ನು ರದ್ದುಗೊಳಿಸಿದ್ದಾರೆ' ಎಂದು ರಾಜೇ ಅವರ ಮಾಧ್ಯಮ ಸಲಹೆಗಾರರು ತಿಳಿಸಿದ್ದಾರೆ.
ಲಲಿತ್ ಮೋದಿ ಜತೆಗಿನ ವಸುಂಧರಾ ರಾಜೇ ಅವರ ಸಾಮೀಪ್ಯ ಮತ್ತು ವ್ಯಾವಹಾರಿಕ ಸಂಬಂಧಗಳು ಈಗ ರಾಜೇ ಅವರ ನೆತ್ತಿ ಮೇಲಿನ ತೂಗುಕತ್ತಿಯಾಗಿ ಪರಿಣಮಿಸಿದ್ದು, ರಾಜೇ ಅವರನ್ನು ವಜಾ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


