ಪತಿ ವಿರುದ್ಧ ಸುಳ್ಳು ಆರೋಪ: ಪತ್ನಿಗೆ 1 ಲಕ್ಷ ರು. ದಂಡ ವಿಧಿಸಿದ ಕೋರ್ಟ್
ಪತಿ ಹಾಗೂ ಅವರ ಪೋಷಕರ ವಿರುದ್ಧ ಸುಳ್ಳು ಆರೋಪ ಮಾಡಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ದುರುಪಯೋಗಪಡಿಸಿಕೊಂಡ ಆರೋಪದ...

ನವದೆಹಲಿ: ಪತಿ ಹಾಗೂ ಅವರ ಪೋಷಕರ ವಿರುದ್ಧ ಸುಳ್ಳು ಆರೋಪ ಮಾಡಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮಹಿಳೆಯೊಬ್ಬರಿಗೆ ಕೋರ್ಟ್ 1 ಲಕ್ಷ ರು. ದಂಡ ವಿಧಿಸಿದೆ.
ಪತಿ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಅಗತ್ಯ ಮಾಹಿತಿಗಳನ್ನು ಮುಚ್ಚಿ ಹಾಕಿದ್ದಾರೆಂದು ಎಂದು ಹೇಳಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಶಿವಾನಿ ಚೌಹಾಣ್ ಅವರು ದಕ್ಷಿಣ ದೆಹಲಿಯ ಮಹಿಳೆಯ ದೂರನ್ನು ವಜಾಗೊಳಿಸಿದ್ದು ಅಲ್ಲದೆ ಒಂದು ಲಕ್ಷ ರು. ದಂಡ ವಿಧಿಸಿದ್ದಾರೆ.
'ಮಹಿಳೆಯರು ಅತೀವವಾಗಿ ಕೌಟುಂಬಿಕ ದೌರ್ಜನ್ಯಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಮಹಿಳೆಯರನ್ನು ರಕ್ಷಿಸಲು ಮಹಿಳಾ ರಕ್ಷಣೆ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯಿದೆಯನ್ನು ಜಾರಿಗೊಳಿಸಲಾಯಿತು. ಇದನ್ನು ಸಂತ್ರಸ್ತರ ರಕ್ಷಣೆಗಾಗಿ ಬಳಸಬೇಕೇ ಹೊರತು, ಸ್ವಹಿತಾಸಕ್ತಿಗಾಗಿ ಅಲ್ಲ,' ಎಂದು ಕೋರ್ಟ್ ಹೇಳಿದೆ.
'ಪತಿ ಮತ್ತವರ ಪೋಷಕರನ್ನು ಸಿಕ್ಕಿಸಲು ಸುಳ್ಳು ಸಾಕ್ಷ್ಯಗಳನ್ನು ನೀಡಲಾಗಿದೆ. ಅಗತ್ಯ ಅಂಶಗಳನ್ನು ಮುಚ್ಚಿಡಲಾಗಿದೆ. ಆ ಮೂಲಕ ಅನ್ಯಾಯವಾಗಿ ಹಣ ಪಡೆಯಲು ಯತ್ನಿಸಿದ್ದು, ಕಾಯಿದೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ,' ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
1989ರಲ್ಲಿ ಪ್ರೀತಿಸಿ, ಮದುವೆಯಾಗಿದ್ದ ದೂರುದಾರಳು ಹಾಗೂ ಪತಿ ನಡುವೆ ವೈಮನಸ್ಯ ಆರಂಭವಾಗಿತ್ತು. ಅದಕ್ಕೆ ಪತಿ ದೈಹಿಕವಾಗಿ, ಮಾನಸಿಕವಾಗಿ ದೌರ್ಜನ್ಯವೆಸಗುತ್ತಿದ್ದಾನೆ ಎಂದು ಆರೋಪಿಸಿದ್ದಲ್ಲದೆ, ಇದನ್ನು ನೋಡಿಕೊಂಡು ಪತಿಯ ಪೋಷಕರು ಸುಮ್ಮನಿದ್ದಾರೆ ಎಂದೂ ಮಹಿಳೆ ದೂರು ದಾಖಲಿಸಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


